ನವದೆಹಲಿ (ಪಿಟಿಐ): ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟನಿ ಅಲ್ಬನೀಸ್ ಅವರು ನಾಲ್ಕು ದಿನಗಳ ಭೇಟಿಗಾಗಿ ಇದೇ 8ರಂದು ಭಾರತಕ್ಕೆ ಬರಲಿದ್ದಾರೆ. ಎರಡೂ ರಾಷ್ಟ್ರಗಳ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಹಿನ್ನೆಲೆಯಲ್ಲಿ ಅವರು ಭಾರತದ ಪ್ರವಾಸ ಕೈಗೊಳ್ಳಲಿದ್ದಾರೆ.

2017ರ ಬಳಿಕ ಆಸ್ಟ್ರೇಲಿಯಾ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.

‘ಭಾರತದೊಂದಿಗಿನ ನಮ್ಮ ಬಾಂಧವ್ಯ ಬಲವಾಗಿದೆ. ಆದರೆ ಅದನ್ನು ಇನ್ನೂ ಗಟ್ಟಿಗೊಳಿಸಬಹುದು’ ಎಂದು ಅಲ್ಬನೀಸ್ ಅವರು ಶನಿವಾರ ಹೇಳಿದ್ದಾರೆ.

‘ನವದೆಹಲಿಯಲ್ಲಿ ನಡೆಯಲಿರುವ ಭಾರತ– ಆಸ್ಟ್ರೇಲಿಯಾ ವಾರ್ಷಿಕ ನಾಯಕರ ಶೃಂಗಸಭೆಯಲ್ಲಿ ಅಲ್ಬನೀಸ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಅಲ್ಬನೀಸ್ ಅವರು ಮೋದಿ ಅವರೊಂದಿಗೆ, ಅಹಮದಾಬಾದ್‌ನಲ್ಲಿ ನಡೆಯಲಿರುವ ಬಾರ್ಡರ್– ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯವನ್ನು ವೀಕ್ಷಿಸಲಿದ್ದಾರೆ’ ಎಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಕಚೇರಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.