ಚಮೋಲಿ (ಉತ್ತರಾಖಂಡ): ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಹಿಮಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ಹೈ-ಅಲರ್ಟ್ ಘೋಷಿಸಲಾಗಿದೆ.

ಚಮೋಲಿ ಜಿಲ್ಲೆಯ ತಪೋವನ್ ಪ್ರದೇಶದ ರೈನಿ ಗ್ರಾಮದಲ್ಲಿ ಹಿಮನದಿ ಉಕ್ಕಿ ಹರಿದಿದ್ದು, ಋಷಿ ಗಂಗಾ ವಿದ್ಯುತ್ ಯೋಜನೆಗೆ ಹಾನಿಯುಂಟಾಗಿದೆ.

ಹಿಮಪ್ರವಾಹದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಎಲ್ಲ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಸೇರಿದಂತೆ ಜಿಲ್ಲಾಡಳಿತವು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಗೆಚಾಲನೆ ನೀಡಿದ್ದಾರೆ.

ಇದನ್ನೂ ಓದಿ:ಮೊದಲ ಸಿಆರ್ಪಿಎಫ್ ಮಹಿಳಾ ತಂಡ ‘ಕೋಬ್ರಾ‘ ಘಟಕಕ್ಕೆ ಸೇರ್ಪಡೆ

ಜನರಲ್ಲಿ ಗಂಗಾ ನದಿಯ ಕಡೆಗೆ ಹೋಗದಂತೆ ಎಚ್ಚರಿಸಲಾಗಿದೆ. ಅಲಕಾನಂದ ನದಿಯ ದಂಡದಲ್ಲಿ ವಾಸಿಸುವ ಜನರಲ್ಲಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಹಿಮಪಾತ ಉಂಟಾಗಿರುವ ಹಿನ್ನೆಲೆಯಲ್ಲಿ ಕಣಿವೆ ಪ್ರದೇಶದ ನದಿಯ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದೆ.ರೆನಿ ಗ್ರಾಮದ ಸಮೀಪ ಧೌಲಿಗಂಗಾ ಹಾಗೂ ಜೋಶಿಮಠ ಪ್ರದೇಶದಲ್ಲಿ ವ್ಯಾಪಕ ಪ್ರವಾಹದ ಸ್ಥಿತಿ ಉಂಟಾಗಿದೆ.

ಇದನ್ನೂ ಓದಿ:ಉತ್ತರಾಖಂಡದಲ್ಲಿ ಹಿಮಪಾತ: 150ಕ್ಕೂ ಅಧಿಕ ಜನರು ಕಣ್ಮರೆ Live

ಐಟಿಬಿಪಿಯ ಎರಡು ತಂಡಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಎನ್ಡಿಆರ್ಎಫ್ನ ಮೂರು ತಂಡಗಳು ಡೆಹ್ರಾಡೂನ್ನಿಂದ ಧಾವಿಸಲಾಗುತ್ತಿದೆ. ಹೆಚ್ಚುವರಿಮೂರು ತಂಡಗಳು ವಾಯುಪಡೆಯ ಹೆಲಿಕಾಪ್ಟರ್ನೊಂದಿಗೆ ಸಂಜೆಯ ವೇಳೆಗೆ ತಲುಪಲಿದೆ. ಎಸ್ಡಿಆರ್ಎಫ್ ಹಾಗೂ ಸ್ಥಳೀಯ ಆಡಳಿತ ಈಗಾಗಲೇ ಪ್ರದೇಶದಲ್ಲಿದೆ ಎಂದು ಕೇಂದ್ರ ಗೃಹ ಸಚಿವಾಲಯದ ರಾಜ್ಯ ಸಚಿವ ನಿತ್ಯಾನಂದ ರಾಯ್ ತಿಳಿಸಿದ್ದಾರೆ.

ಇದನ್ನೂ ಓದಿ:ಉತ್ತರಾಖಂಡದಲ್ಲಿ ಹಿಮಪಾತ: 150ಕ್ಕೂ ಅಧಿಕ ಜನರು ಕಣ್ಮರೆ, ಕೇಂದ್ರದಿಂದ ನೆರವು

ತಕ್ಷಣ ಪರಿಹಾರ ಕಾರ್ಯಾಚರಣೆಗೆ ನೆರವಾಗುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ. ವಾಯುಪಡೆ ಹಾಗೂ ಎನ್ಡಿಆರ್ಎಫ್ ಪಡೆಗಳನ್ನು ರವಾನಿಸಲು ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.