ನವದೆಹಲಿ: ರಾಜ್ಯ ಸರ್ಕಾರಗಳಿಗೆ ನಿಗದಿಪಡಿಸಲಾದ ‘ಕೋವ್ಯಾಕ್ಸಿನ್’ ಲಸಿಕೆಯ ಪ್ರತಿ ಡೋಸ್‌ನ ದರವನ್ನು ₹ 200 ಕಡಿತಗೊಳಿಸಲು ಭಾರತ್ ಬಯೋಟೆಕ್ ಗುರುವಾರ ನಿರ್ಧರಿಸಿದೆ.

ಕೋವ್ಯಾಕ್ಸಿನ್ ಲಸಿಕೆಯ ಪ್ರತಿ ಡೋಸ್‌ಗೆ ರಾಜ್ಯಗಳಿಗೆ ₹600 ಹಾಗೂ ಖಾಸಗಿ ಆಸ್ಪತ್ರೆಗಳಿಗೆ ₹ 1,200 ದರ ನಿಗದಿಪಡಿಸಲಾಗಿತ್ತು. ಈಗ ಅದನ್ನು ₹ 400ಕ್ಕೆ ಇಳಿಸಲಾಗಿದೆ.

ಸೀರಂ ಇನ್‌ಸ್ಟಿಟ್ಯೂಟ್ ಲಸಿಕೆಯ ದರವನ್ನು ₹100 ಕಡಿತಗೊಳಿಸಿದ ಮರುದಿನವೇ ಭಾರತ್ ಬಯೋಟೆಕ್ ಈ ನಿರ್ಧಾರ ತೆಗೆದುಕೊಂಡಿದೆ.

‘ಆರೋಗ್ಯ ವ್ಯವಸ್ಥೆಯಲ್ಲಿನ ಅಗಾಧ ಸವಾಲುಗಳನ್ನು ಮನಗಂಡು, ದರ ಕಡಿತಗೊಳಿಸಲಾಗಿದೆ’ ಎಂದು ಭಾರತ್ ಬಯೋಟೆಕ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಕೃಷ್ಣ ಎಲ್ಲಾ ತಿಳಿಸಿದ್ದಾರೆ.

ಲಸಿಕೆ ದರಗಳ ಬಗ್ಗೆ ರಾಜಕೀಯ ಪಕ್ಷಗಳು ಹಾಗೂ ವಿವಿಧ ವಲಯಗಳಿಂದ ಟೀಕೆಗಳು ವ್ಯಕ್ತವಾಗಿದ್ದವು. ಏಕರೂಪದ ದರ ನಿಗದಿಪಡಿಸಬೇಕು ಎಂದು ರಾಜಕೀಯ ಪಕ್ಷಗಳು ಒತ್ತಾಯಿಸಿದ್ದವು.

ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಮತ್ತು ಸೀರಂ ಇನ್‌ಸ್ಟಿಟ್ಯೂಟ್ಕೋವಿಶೀಲ್ಡ್ ಲಸಿಕೆ ಕೇಂದ್ರ ಸರ್ಕಾರಕ್ಕೆ ಪ್ರತಿ ಡೋಸ್‌ಗೆ ₹150ಕ್ಕೆ ಲಭ್ಯವಾಗುತ್ತದೆ.

Karnataka Covid-19 Update: ರಾಜ್ಯದಲ್ಲಿಂದು 35,024 ಪ್ರಕರಣ, 270 ಸಾವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.