ಪಟ್ನಾ: ಪ್ರಧಾನಿ ಹುದ್ದೆ ಮೇಲೆ ಕಣ್ಣಿಟ್ಟಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬಿಹಾರದಲ್ಲಿ ಹೊಸ ಮಹಾ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಅವರು, ತಮ್ಮ ವಿರುದ್ಧದ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ.

2014ರಲ್ಲಿ ಅಧಿಕಾರಕ್ಕೆ ಬಂದವರು 2024ರಲ್ಲಿಯೂ ಗೆಲ್ಲಲಿದ್ದಾರಾ? ಎಲ್ಲ ಪ್ರತಿಪಕ್ಷಗಳೂ 2024ರ ವೇಳೆಗೆ ಒಗ್ಗಟ್ಟಾಗಬೇಕೆಂದು ಬಯಸುತ್ತೇನೆ. ನಾನು ಅಂಥ (ಪ್ರಧಾನಿ) ಯಾವುದೇ ಹುದ್ದೆಗಳ ಆಕಾಂಕ್ಷಿಯಲ್ಲ ಎಂದು ನಿತೀಶ್ ಕುಮಾರ್ ಹೇಳಿರುವುದಾಗಿ ‘ಎಎನ್ಐ’ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.

ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ: ತೇಜಸ್ವಿ ಡಿಸಿಎಂ

ಬಿಜೆಪಿಯೊಂದಿಗಿನ ಮೈತ್ರಿ ಕಡಿದುಕೊಂಡಿರುವ ನಿತೀಶ್ ಕುಮಾರ್ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಕೆಲ ಮಂದಿ ರಾಜಕೀಯ ವಿಶ್ಲೇಷಕರು ಮಂಗಳವಾರ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಬಿಹಾರ: ಸಚಿವ ಸಂಪುಟದಲ್ಲಿ ಆರ್ಜೆಡಿ ಪ್ರಾಬಲ್ಯ, ನಿತೀಶ್ಗೆ ಗೃಹ ಖಾತೆ ಸಾಧ್ಯತೆ

‘ನೀವು ದೇಶದ ರಾಜಕೀಯ ನಾಯಕರ ವ್ಯಕ್ತಿತ್ವಗಳನ್ನು ಮೌಲ್ಯಮಾಪನ ಮಾಡಿದರೆ, ನಿತೀಶ್ ಕುಮಾರ್ ಅವರು ಪ್ರಧಾನಿಯಾಗಲು ಅರ್ಹರು ಎನಿಸುತ್ತಾರೆ. ಇದಕ್ಕಾಗಿ ನಾವು ಇಂದು ಯಾವುದೇ ಹಕ್ಕು ಮಂಡಿಸುತ್ತಿಲ್ಲ. ಆದರೆ ಅವರು ಪ್ರಧಾನಿಯಾಗುವ ಎಲ್ಲಾ ಗುಣಗಳನ್ನು ಹೊಂದಿದ್ದಾರೆ’ ಎಂದು ಜೆಡಿಯು ರಾಷ್ಟ್ರೀಯ ಸಂಸದೀಯ ಮಂಡಳಿಯ ಅಧ್ಯಕ್ಷ ಉಪೇಂದ್ರ ಕುಶ್ವಾಹಾ ಪಾಟ್ನಾದಲ್ಲಿ ಹೇಳಿದ್ದರು. ಆದರೆ, ಪ್ರಧಾನಿ ಹುದ್ದೆ ಆಕಾಂಕ್ಷಿಯೇ ಎಂದು ಪತ್ರಕರ್ತರು ಕೇಳಿದ್ದ ಪ್ರಶ್ನೆಗೆ ಉತ್ತರಿಸಲು ನಿತೀಶ್ ನಿರಾಕರಿಸಿದ್ದರು.

2024ಕ್ಕೆ ಪ್ರಧಾನಿ ಅಭ್ಯರ್ಥಿಯಾಗುವರೇ ನಿತೀಶ್? ನಿಷ್ಠೆ ಮೇಲೆ ಎಲ್ಲರಿಗೂ ಅನುಮಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.