ಆದಿತ್ಯಾಪುರ (ಜಾರ್ಖಂಡ್): ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದ ಬಿಜೆಪಿಯ ಸ್ಥಳೀಯ ನಾಯಕಿಯೊಬ್ಬರನ್ನು ಬಂಧಿಸಲಾಗಿದೆ. ಅವರ ಮೊಬೈಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಜಾರ್ಖಂಡ್ನ ಸರಾಯಿಕೆಲಾ ಖರಸಾಂವ ಜಿಲ್ಲೆಯ ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯೆ ಅನಿಶಾ ಸಿನ್ಹಾ ಅವರನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರವಾದಿ ಮಹಮ್ಮದ್ ವಿರುದ್ಧ ನೂಪುರ್ ಶರ್ಮಾ ಅವಹೇಳನಕಾರಿ ಹೇಳಿಕೆಯನ್ನು ನೀಡಿದ ಬೆನ್ನಲ್ಲೇ ರಾಂಚಿಯಲ್ಲಿ ಹಿಂಸಾತ್ಮಕ ಘಟನೆಗಳು ನಡೆದಿದ್ದರಿಂದ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾಮಾಜಿಕ ಜಾಲತಾಣಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅನಿಶಾ ಸಿನ್ಹಾ ಅವರು ಪೊಲೀಸ್ ಠಾಣೆಯಲ್ಲಿ ಈಗಾಗಲೇ ತನ್ನ ತಪ್ಪಿಗೆ ಕ್ಷಮೆ ಕೇಳಿದ್ದಾರೆ. ಆದರೂ ಅವರನ್ನು ಬಂಧಿಸುವ ಮೂಲಕ ರಾಜ್ಯ ಸರ್ಕಾರವು ದ್ವೇಷ ಸಾಧಿಸುತ್ತಿದೆ. ಬಿಜೆಪಿ ನಾಯಕರನ್ನು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಮುಖಂಡರಾದ ಬಿಜಯ್ ಮಹತೊ ಆರೋಪಿಸಿದ್ದಾರೆ.

ಉತ್ತರ ಪ್ರದೇಶ: ಪ್ರವಾದಿ ಮಹಮ್ಮದರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್, ಓರ್ವನ ಬಂಧನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.