ಗುವಾಹಟಿ: ತಮ್ಮ ಫಾರ್ಮ್‌ಹೌಸ್‌ನಲ್ಲಿ ಅಕ್ರಮವಾಗಿ ವೇಶ್ಯಾಗೃಹ ನಡೆಸುತ್ತಿದ್ದ ಆರೋಪ ಹೊತ್ತಿರುವ ಬಿಜೆಪಿ ಮೇಘಾಲಯ ಘಟಕದ ಉಪಾಧ್ಯಕ್ಷ ಬರ್ನಾರ್ಡ್ ಎನ್. ಮಾರಕ್ ಅವರು ತಲೆಮರೆಸಿಕೊಂಡಿದ್ದು, ಪತ್ತೆಗಾಗಿ ಶೋಧ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಮಾರಕ್ ಅವರ ಫಾರ್ಮ್‌ಹೌಸ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಓರ್ವ ಬಾಲಕಿ ಸಹಿತ ಆರು ಮಕ್ಕಳನ್ನು ರಕ್ಷಿಸಲಾಗಿತ್ತು. 73 ಜನರನ್ನು ಬಂಧಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದರು.

ಆದರೆ ಶರಣಾಗಿ ತನಿಖೆಗೆ ಸಹಕರಿಸುವಂತೆ ಮಾರಕ್‌ಗೆ ಸೂಚಿಸಲಾಗಿತ್ತು. ಮಾರಕ್ ಅವರು ತಪ್ಪಿಸಿಕೊಂಡಿದ್ದು, ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ವೆಸ್ಟ್ ಗಾರೊ ಹಿಲ್ಸ್ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದವು ಎಂದು ಸ್ಥಳೀಯರು ಪೊಲೀಸರಿಗೆ ಮೌಖಿಕ ದೂರು ನೀಡಿದ್ದಾರೆ.

ಅತ್ಯಾಚಾರ, ವಂಚನೆ ಆರೋಪ: ಉತ್ತರ ಪ್ರದೇಶ ಮಾಜಿ ಶಾಸಕನ ಪುತ್ರ ಸೆರೆ

ಪಕ್ಷದ ನಾಯಕನ ಫಾರ್ಮ್ ಹೌಸ್ ಮೇಲೆ ನಡೆದ ದಾಳಿಯನ್ನು ಬಿಜೆಪಿ ಖಂಡಿಸಿದ್ದು, ರಾಜಕೀಯ ಉದ್ದೇಶವನ್ನಿಟ್ಟುಕೊಂಡು ಪೊಲೀಸರು ಆರೋಪ ಮಾಡಿದ್ದಾರೆ. ಮಾರಕ್ ಅವರು ಹೋಮ್ ಸ್ಟೇ ನಡೆಸುತ್ತಿದ್ದರು. ಅದರಲ್ಲಿ ನಿರಾಶ್ರಿತರಿಗೆ ಆಶ್ರಯ ನೀಡಲಾಗಿತ್ತು ಎಂದು ಹೇಳಲಾಗಿದೆ.

ಛತ್ತೀಸ್ಗಡ: ವಾಹನ, ಯಂತ್ರಗಳಿಗೆ ಬೆಂಕಿ ಹಚ್ಚಿದ ನಕ್ಸಲರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.