ನವದೆಹಲಿ: ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಇವರೆಲ್ಲ ನಕಲಿ ಹಿಂದೂಗಳು. ತಮ್ಮ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ನ 38ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಕಾಂಗ್ರೆಸ್‌ನ ಸಿದ್ಧಾಂತವು ಬಿಜೆಪಿ ಮತ್ತು ಆರ್‌ಎಸ್ಎಸ್ ಸಿದ್ಧಾಂತಕ್ಕೆ ಸಂಪೂರ್ಣ ವಿರುದ್ಧವಾದುದು. ಈ ಎರಡು ಸಿದ್ಧಾಂತಗಳಲ್ಲಿ ಒಂದು ಮಾತ್ರ ದೇಶವನ್ನು ಆಳಬಲ್ಲದು’ ಎಂದರು.

‘ಇವರು ಯಾವ ರೀತಿಯ ಹಿಂದೂಗಳು, ಇವರು ನಕಲಿ ಹಿಂದೂಗಳು. ಇವರೆಲ್ಲಾ ಹಿಂದೂ ಧರ್ಮವನ್ನು ಪ್ರಯೋಗಿಸುತ್ತಿದ್ದಾರೆ. ಇವರು ಧರ್ಮದ ದಲ್ಲಾಳಿಗಳು. ಆದರೆ, ಇವರು ಹಿಂದೂಗಳಲ್ಲ’ ಎಂದು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

‘ಗುರಿ ಸಾಧನೆಗೆ ಸಹಕರಿಸುವ ಶಕ್ತಿಯನ್ನು ಲಕ್ಷ್ಮಿದೇವಿ ಪ್ರತಿನಿಧಿಸಿದರೆ ಸಂರಕ್ಷಣೆಯ ಶಕ್ತಿಯನ್ನು ದುರ್ಗಾದೇವಿ ಪ್ರತಿನಿಧಿಸುತ್ತಾಳೆ’ ಎಂದು ಪ್ರತಿಪಾದಿಸಿದ ರಾಹುಲ್, ‘ಕಾಂಗ್ರೆಸ್ ನೇತೃತ್ವದ ಸರ್ಕಾರವಿದ್ದಾಗ ಈ ಶಕ್ತಿಗಳನ್ನು ಬಲಪಡಿಸಲಾಗಿದೆ. ಆದರೆ, ಈಗ ಅಧಿಕಾರದಲ್ಲಿರುವ ಬಿಜೆಪಿ ಈ ಶಕ್ತಿಗಳನ್ನು ದುರ್ಬಲಗೊಳಿಸಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.