ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಮೂಲದ ಚಾರ್ಟೆಡ್ ಅಕೌಂಟೆಂಟ್ನನ್ನು (ಸಿಎ) ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ.

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ, ಬಿಆರ್ಎಸ್ನ ವಿಧಾನ ಪರಿಷತ್ ಸದಸ್ಯೆ ಕೆ.ಕವಿತಾ ಅವರ ಲೆಕ್ಕ ಪರಿಶೋಧಕ ಬುಚ್ಚಿಬಾಬು ಗೊರಂಟ್ಲಾನನ್ನು ಬಂಧಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ₹6 ಸಾವಿರ ಆಮಿಷ: ರಮೇಶ್ ಜಾರಕಿಹೊಳಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಅಬಕಾರಿ ಹಗರಣದಲ್ಲಿ ವಿಚಾರಣೆಗಾಗಿ ದೆಹಲಿಗೆ ಬರುವಂತೆ ಬುಚ್ಚಿಬಾಬುಗೆ ಸೂಚಿಸಲಾಗಿತ್ತು. ಆದರೆ ತನಿಖೆಗೆ ಸಹಕಾರ ನೀಡದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಚ್ಚಿಬಾಬು ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಸಿಬಿಐ ಮೂಲಗಳು ಹೇಳಿವೆ.

2021-22ರ ದೆಹಲಿ ಅಬಕಾರಿ ಹಗರಣದಲ್ಲಿ ಹೈದರಾಬಾದ್ ಮೂಲದ ಹೋಲ್ಸೆಲ್ ಹಾಗೂ ರಿಟೇಲ್ ಮತ್ತು ಅದರ ಮಾಲಿಕರಿಗೆ ಬುಚ್ಚಿಬಾಬು ಕಾನೂನುಬಾಹಿರವಾಗಿ ಪರವಾನಗಿ ಒದಗಿಸಿದ್ದರು ಎಂದು ಸಿಬಿಐ ಆರೋಪಿಸಿದೆ.

ದೆಹಲಿ ಅಬಕಾರಿ ಗುತ್ತಿಗೆ ಹಗರಣದಲ್ಲಿ ಕವಿತಾ ಅವರನ್ನು ಕಳೆದ ವರ್ಷ ಡಿಸೆಂಬರ್ನಲ್ಲಿ ಸಿಬಿಐ ವಿಚಾರಣೆಗೊಳಪಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.