ನವದೆಹಲಿ: ಖ್ಯಾತ ಪರಿಸರವಾದಿ ಹಾಗೂ ‘ಚಿಪ್ಕೊ ಚಳವಳಿ’ ಪ್ರವರ್ತಕ ಸುಂದರಲಾಲ್ ಬಹುಗುಣ ಅವರು ಕೋವಿಡ್–19ನಿಂದಾಗಿ ರಿಷಿಕೇಶದ ಏಮ್ಸ್ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಕೋವಿಡ್–19 ದೃಢಪಟ್ಟಿದ್ದರಿಂದ ಅವರನ್ನು ಮೇ 8ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ‘ಕಳೆದ ರಾತ್ರಿ ಅವರ ಆರೋಗ್ಯ ಬಿಗಡಾಯಿಸಿತು. ಆಮ್ಲಜನಕ ಮಟ್ಟ ಕುಸಿದ ಕಾರಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಯಿತು. ಚಿಕಿತ್ಸೆಗೆ ಸ್ಫಂದಿಸದೇ ಮಧ್ಯಾಹ್ನ 12.05ಕ್ಕೆ ಅವರು ಕೊನೆಯುಸಿರೆಳೆದರು’ ಎಂದು ಏಮ್ಸ್ ನಿರ್ದೇಶಕ ಡಾ.ರವಿಕಾಂತ್ ಹೇಳಿದರು.

ಬೃಹತ್ ಅಣೆಕಟ್ಟು, ಕೈಗಾರಿಕೆ ಮತ್ತು ರಸ್ತೆಗಳ ನಿರ್ಮಾಣಕ್ಕಾಗಿ ಅರಣ್ಯ ನಾಶ ಆಗುತ್ತಿರುವುದನ್ನು ತಡೆಯಲೆಂದು 1973ರಲ್ಲಿ ಚಿಪ್ಕೊ ಚಳವಳಿ ಆರಂಭವಾಗಿತ್ತು. ಉತ್ತರ ಪ್ರದೇಶದಲ್ಲಿ ಈ ಚಳವಳಿಗೆ ಪರಿಸರವಾದಿ ಸುಂದರ್ ಲಾಲ್ ಬಹುಗುಣ ನಾಂದಿ ಹಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.