ನವದೆಹಲಿ: ಭಾರತ ಮತ್ತು ಚೀನಾ ಸೇನೆಯ ನಡುವೆ ನಡೆದ ಗಾಲ್ವಾನ್ ಘರ್ಷಣೆಯಲ್ಲಿ ಸಾವಿಗೀಡಾದ ಕರ್ನಲ್ ಸಂತೋಷ್ ಬಾಬು ಅವರಿಗೆ ಮರಣೋತ್ತರ 'ಮಹಾವೀರ ಚಕ್ರ' ಘೋಷಣೆಯಾಗಿದೆ.

ಕಳೆದ ವರ್ಷ ಜೂನ್‌ನಲ್ಲಿ ಲಡಾಖ್‌ನ ಪೂರ್ವಭಾಗದ ಗಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ ಬಾಬು ಹುತಾತ್ಮರಾದರು.

2004ರಲ್ಲಿ ಸೇನೆಗೆ ಸೇರಿದ್ದ ಬಾಬು, ಜಮ್ಮು ಮತ್ತು ಕಾಶ್ಮೀರದಲ್ಲಿ ವೃತ್ತಿ ಆರಂಭಿಸಿದ್ದರು. ಅವರು ತೆಲಂಗಾಣದ ಸೂರ್ಯಪೇಟೆಯವರು. ಬಿಹಾರದ–16 ರೆಜಿಮೆಂಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಬು ಅವರು ಪತ್ನಿ, ಮಗಳು ಮತ್ತು ಮಗನನ್ನು ಅಗಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.