ನವದೆಹಲಿ: ನಾಯಕತ್ವಕ್ಕೆ ಸಂಬಂಧಿಸಿದಂತೆ ರಾಜಸ್ಥಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್‌ನ ಹೈಕಮಾಂಡ್ ಅಸಮಾಧಾನಗೊಂಡಿದೆ. ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಮತ್ತು ಸಚಿನ್ ಪೈಲಟ್ ಅವರನ್ನು ದೆಹಲಿಗೆ ಬರುವಂತೆ ಪಕ್ಷ ಸೂಚಿಸಿದೆ.

ಒಂದು ವೇಳೆ ಗೆಹಲೋತ್ ಎಐಸಿಸಿ ಅಧ್ಯಕ್ಷರಾದರೆ, ಅವರಿಂದ ತೆರವಾಗುವ ಮುಖ್ಯಮಂತ್ರಿ ಸ್ಥಾನಕ್ಕೆ ಸಚಿನ್ ಪೈಲಟ್ ಅವರನ್ನು ನಿಯೋಜಿಸಲಾಗುತ್ತದೆ ಎಂಬ ಕಾರಣಕ್ಕೆ ಗೆಹಲೋತ್ ಬೆಂಬಲಿಗರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. ಕೆಲವರು ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆಯನ್ನೂ ನೀಡಿದ್ದಾರೆ ಎಂದು ವರದಿಯಾಗಿದೆ. ಈ ಬೆಳವಣಿಗೆ ಕಾಂಗ್ರೆಸ್‌ಗೆ ಮುಜುಗರ ಸೃಷ್ಟಿ ಮಾಡಿದೆ.

‘ನನ್ನ ಕೈಯಲ್ಲಿ ಏನೂ ಇಲ್ಲ. ಎಲ್ಲವನ್ನೂ ಶಾಸಕರು ನಿರ್ಧರಿಸುತ್ತಾರೆ’ ಎಂದು ಗೆಹಲೋತ್ ಅವರು ಪಕ್ಷದ ಹೈಕಮಾಂಡ್‌ಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಭಾನುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಸಚಿವ ಶಾಂತಿ ಧರಿವಾಲ್ ಅವರ ನಿವಾಸದಲ್ಲಿ ಸಭೆ ಸೇರಿದ್ದ ಗೆಹಲೋತ್ ನಿಷ್ಠ 80ಕ್ಕೂ ಹೆಚ್ಚು ಶಾಸಕರು, ಪೈಲಟ್ ಅವರನ್ನು ಸಿಎಂ ರೇಸ್‌ನಿಂದ ಹೊರದಬ್ಬುವ ಮತ್ತು ಹೊಸ ನಾಯಕನನ್ನು ಆಯ್ಕೆ ಮಾಡುವ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದರು.

‘92 ಶಾಸಕರು ಒಟ್ಟಾಗಿದ್ದೇವೆ. ರಾಜೀನಾಮೆ ನೀಡಲು ನಿರ್ಧರಿಸಿದ್ದೇವೆ. ನಮ್ಮ ನಾಯಕನನ್ನು ಆಯ್ಕೆ ಮಾಡಲು ನಮಗೆ ಎಲ್ಲಾ ಹಕ್ಕಿದೆ. ನಮ್ಮ ನಾಯಕನನ್ನು ನಾವೇ ನಿರ್ಧರಿಸುತ್ತೇವೆ’ ಎಂದು ಸಚಿವ ಪ್ರತಾಪ್ ಖಚ್ರಿಯಾವಾಸ್ ಹೇಳಿದ್ದಾರೆ.

ಈ ಶಾಸಕರು ವಿಧಾನಸಭೆ ಸ್ಪೀಕರ್ ಸಿ.ಪಿ. ಜೋಶಿ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಇವುಗಳನ್ನೂ ಓದಿ

ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು: ಸಾಮೂಹಿಕ ರಾಜೀನಾಮೆಗೆ ಮುಂದಾದ 80 ಶಾಸಕರು

ಹೊಸ ತಲೆಮಾರಿಗೆ ಅವಕಾಶ ಸಿಗಬೇಕು: ನಾಯಕತ್ವ ಬದಲಾವಣೆಯ ಸುಳಿವು ನೀಡಿದ ಗೆಹಲೋತ್

ಗೆಹಲೋತ್, ತರೂರ್ ಇಬ್ಬರೂ ರಾಹುಲ್ ಕೈಗೊಂಬೆಗಳು: ಬಿಜೆಪಿ ಲೇವಡಿ

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವೆ ಎಂದ ಗೆಹಲೋತ್: ಯಾರಾಗುವರು ರಾಜಸ್ಥಾನ ಸಿಎಂ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.