ನವದೆಹಲಿ: ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲುವುದು ಖಚಿತ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಇತ್ತೀಚೆಗೆ ರಾಜಸ್ಥಾನದ ಉದಯಪುರದಲ್ಲಿ ನಡೆದ ಕಾಂಗ್ರೆಸ್ ಚಿಂತನ ಶಿಬಿರದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಅವರು, ಶಿಬಿರದಲ್ಲಿ ಯಾವ ಅರ್ಥಪೂರ್ಣ ನಿರ್ಧಾರವನ್ನೂ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

‘ಉದಯಪುರದಲ್ಲಿ ನಡೆದ ಕಾಂಗ್ರೆಸ್ ಚಿಂತನ ಶಿಬಿರದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೆಲವು ಬಾರಿ ನನ್ನನ್ನು ಕೋರಲಾಗಿದೆ. ನನ್ನ ದೃಷ್ಟಿಯಲ್ಲಿ, ಯಥಾಸ್ಥಿತಿಯನ್ನು ಮುಂದುವರಿಸುವುದು ಬಿಟ್ಟರೆ ಮತ್ತೇನೂ ಅರ್ಥಪೂರ್ಣ ನಿರ್ಧಾರವನ್ನು ಶಿಬಿರದಲ್ಲಿ ಕೈಗೊಳ್ಳಲಾಗಿಲ್ಲ. ಕನಿಷ್ಠಪಕ್ಷ ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಗಳಲ್ಲಿ ಸೋಲುವ ವರೆಗೆ ಈಗಿನ ನಾಯಕತ್ವಕ್ಕೆ ಅವಕಾಶ ನೀಡಲಾಗಿದೆ!’ ಎಂದು ಪ್ರಶಾಂತ್ ಕಿಶೋರ್ ಮಾರ್ಮಿಕವಾಗಿ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಚಿಂತನ ಶಿಬಿರ ಸಮಾರೋಪ: ಭಾರತ ಜೋಡೋ ಯಾತ್ರೆಗೆ ‘ಕೈ’ ಸಜ್ಜು

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಭಾರತ್ ಜೋಡೋ ಯಾತ್ರೆ’ಯನ್ನು (ಭಾರತವನ್ನು ಒಗ್ಗೂಡಿಸಿ ಯಾತ್ರೆ) ಅಕ್ಟೋಬರ್ 2ರಂದು ಆರಂಭಿಸುವುದಾಗಿ ಚಿಂತನ ಶಿಬಿರದಲ್ಲಿ ಕಾಂಗ್ರೆಸ್ ಘೋಷಿಸಿತ್ತು. ‘ಒಂದು ವ್ಯಕ್ತಿಗೆ ಒಂದು ಹುದ್ದೆ’, ‘ಒಂದು ಕುಟುಂಬಕ್ಕೆ ಒಂದು ಟಿಕೆಟ್’ ಸೇರಿದಂತೆ ಮಹತ್ವದ ಬದಲಾವಣೆಗಳನ್ನು ಮಾಡಲಾಗುವುದು ಎಂದೂ ಶಿಬಿರದ ಬಳಿಕ ಕಾಂಗ್ರೆಸ್ ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.