ನವದೆಹಲಿ: ದೆಹಲಿಯಲ್ಲಿ ಇಂದು ನಡೆದ ಕಾಂಗ್ರೆಸ್ ಪ್ರತಿಭಟನೆ ವೇಳೆ ಯುವ ಕಾಂಗ್ರೆಸ್ನ ರಾಷ್ಟ್ರ ಘಟಕದ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಪೊಲೀಸರು ತಲೆ ಕೂದಲು ಹಿಡಿದು ಎಳೆದಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ್, ‘ಪೊಲೀಸರು ನನ್ನ ಕೂದಲನ್ನು ಎಳೆದಾಡಿ ಹಲ್ಲೆ ನಡೆಸಿದ್ದಾರೆ’ ಎಂದು ಆರೋಪಿಸಿದ್ದಾರೆ.

ಶ್ರೀನಿವಾಸ್ ಅವರ ತಲೆ ಕೂದಲು ಹಿಡಿದು ಎಳೆದಾಡುತ್ತಿರುವ ವಿಡಿಯೊ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಪೊಲೀಸರ ವರ್ತನೆಗೆ ಖಂಡನೆ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸ್ ಅಧಿಕಾರಿಗಳು ಅಶಿಸ್ತು ತೋರಿದ ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಮಂಗಳವಾರ ಎರಡೂವರೆ ತಾಸು ವಿಚಾರಣೆಗೆ ಒಳಪಡಿಸಿದೆ.

ಸೋನಿಯಾ ಅವರನ್ನು ಇ.ಡಿ ವಿಚಾರಣೆಗೆ ಒಳಪಡಿಸುವುದರ ವಿರುದ್ಧ ಕಾಂಗ್ರೆಸ್ ದೇಶದ ಹಲವೆಡೆ ತೀವ್ರ ಪ್ರತಿಭಟನೆ ನಡೆಸಿದೆ. ರಸ್ತೆ ತಡೆ, ರೈಲು ತಡೆ ನಡೆಸಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಸಂಸದರು ಪ್ರತಿಭಟನೆ ನಡೆಸಿದ್ದಾರೆ. ಕೆಲವೆಡೆ ರಾಜಭವನಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದಾರೆ. ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದ್ದಾರೆ.

ಓದಿ...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಎರಡೂವರೆ ಗಂಟೆ ಇ.ಡಿ ವಿಚಾರಣೆ ಎದುರಿಸಿದ ಸೋನಿಯಾ

ನನ್ನ ತಂದೆಯ ಭಾವಚಿತ್ರ ಬಳಸಿ ಮತಯಾಚನೆ ಮಾಡಬೇಡಿ: ಶಿಂದೆ ಬಣದ ವಿರುದ್ಧ ಠಾಕ್ರೆ ಗರಂ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.