ನವದೆಹಲಿ (ಪಿಟಿಐ): ‘ಜನರು ಕೋವಿಡ್ ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಿಲ್ಲ. ಆದರೆ, ಶೇ 100ರಷ್ಟು ಲಸಿಕೆ ನೀಡಬೇಕು ಎಂದಷ್ಟೇ ತಿಳಿಸಲಾಗಿದೆ’ ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಸ್ಪಷ್ಟನೆ ನೀಡಿದೆ.

ತಮಿಳುನಾಡುವಿನ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅಮಿತ್ ಆನಂದ್ ತಿವಾರಿ, ‘ಶೇ 100ರಷ್ಟು ಜನರಿಗೆ ಲಸಿಕೆ ನೀಡುವುದನ್ನು ಕೇಂದ್ರ ಕಡ್ಡಾಯ ಮಾಡಿದೆ’ ಎಂದು ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್ ಮತ್ತು ಬಿ.ಆರ್.ಗವಾಯಿ ಅವರಿದ್ದ ಪೀಠಕ್ಕೆ ತಿಳಿಸಿದರು.

ಕೇಂದ್ರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು,ಇದಕ್ಕೆ ಪ್ರತಿಕ್ರಿಯಿಸುತ್ತಾ ಮೇಲಿನಂತೆ ಸ್ಪಷ್ಟನೆ ನೀಡಿದರು.

‘ನ್ಯಾಯಮೂರ್ತಿಗಳೇ ಒಂದು ಸ್ಪಷ್ಟನೆ. ಶೇ 100ರಷ್ಟು ಲಸಿಕೆ ನೀಡಬೇಕು ಎಂದು ತಿಳಿಸಿದ್ದಕ್ಕೇ ತಮಿಳುನಾಡುವಿನಲ್ಲಿ ಕಡ್ಡಾಯ ಮಾಡಲಾಗಿದೆ. ಇದು, ಕಡ್ಡಾಯವಲ್ಲ. ಈ ಬಗ್ಗೆ ಕೇಂದ್ರ ಯಾವುದೇ ಆದೇಶ ನೀಡಿಲ್ಲ’ ಎಂದು ಮೆಹ್ತಾ ಪೀಠಕ್ಕೆ ತಿಳಿಸಿದರು.

ಲಸಿಕೆ ನೀಡುವ ಪೂರ್ವದಲ್ಲಿ ಕ್ಲಿನಿಕಲ್ ಟ್ರಯಲ್ ನಡೆಸಿರುವ ಕುರಿತ ಅಂಕಿಅಂಶ ಬಹಿರಂಗಪಡಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಪೀಠವು ಕಾಯ್ದಿರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.