ನವದೆಹಲಿ: ‘ನಾವು ಕಟ್ಟಾ ಪ್ರಾಮಾಣಿಕರು. ಸಿಬಿಐ ದಾಳಿಯಿಂದ ನಾನು ಭಯಗೊಂಡಿಲ್ಲ’ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಪ್ರತಿಕ್ರಿಯಿಸಿದ್ದಾರೆ.

‘ನಾನು ಯಾವುದೇ ತಪ್ಪು ಮಾಡಿಲ್ಲ.ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಿದ್ದೇನೆ. ಅಧಿಕಾರಿಗಳು ಕೆಲ ಕಡತಗಳು, ನನ್ನ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಜಪ್ತಿ ಮಾಡಿದ್ದಾರೆ’ ಎಂದು ತಿಳಿಸಿದರು.

‘ಕೇಂದ್ರ ತನಿಖಾ ಸಂಸ್ಥೆಯನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಉತ್ತಮ ಕೆಲಸ ಮಾಡುವುದರಿಂದ ದೆಹಲಿ ಸರ್ಕಾರವನ್ನು ತಡೆಯುವುದೇ ಇದರ ಉದ್ದೇಶ’ ಎಂದು ಆರೋಪಿಸಿದರು.

ಐಎಎಸ್ ಅಧಿಕಾರಿಗಳ ವರ್ಗಾವಣೆ: ಸಿಸೋಡಿಯಾ ನಿವಾಸದ ಮೇಲೆ ಸಿಬಿಐ ದಾಳಿ ಹಿಂದೆಯೇ ದೆಹಲಿ ಸರ್ಕಾರ ಸುಮಾರು 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ಕಾರ್ಯದರ್ಶಿ ಉದಿತ್ ಪ್ರಕಾಶ್ ರೈ ಅವರೂ ವರ್ಗಾವಣೆ ಆದವರಲ್ಲಿ ಸೇರಿದ್ದಾರೆ. ಭ್ರಷ್ಟಾಚಾರ ಪ್ರಕರಣ ಸಂಬಂಧ ರೈ ವಿರುದ್ಧ ಕ್ರಮ ಜರುಗಿಸಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಈಚೆಗೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.