ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಸಲ್ಲಿಸಿದ್ದ ಸಿವಿಲ್ ಮೊಕದ್ದಮೆಗೆ ಸಂಬಂಧಿಸಿ ಕಾಂಗ್ರೆಸ್ ಮುಖಂಡರಾದ ಜೈರಾಮ್ ರಮೇಶ್, ಪವನ್ ಖೇರಾ ಮತ್ತು ನೆಟ್ಟ ಡಿಸೋಜಾ ಅವರಿಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಇತ್ತೀಚೆಗೆ ಸ್ಮೃತಿ ಇರಾನಿ ಮಗಳು ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಅಕ್ರಮ ಬಾರ್ ಆರೋಪಕ್ಕೆ ಸಂಬಂಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿದ್ದ ಎಲ್ಲಾ ಪೋಸ್ಟ್ಗಳನ್ನು ಅಳಿಸಿ ಹಾಕುವಂತೆ ಕಾಂಗ್ರೆಸ್ ಮುಖಂಡರಾದ ಜೈರಾಮ್ ರಮೇಶ್, ಪವನ್ ಖೇರಾ ಮತ್ತು ನೆಟ್ಟಾ ಡಿಸೋಜಾ ಅವರಿಗೆ ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ.

‘ಸ್ಮೃತಿ ಇರಾನಿ ಅವರು ದಾಖಲಿಸಿರುವ ಪ್ರಕರಣಕ್ಕೆ ಔಪಚಾರಿಕವಾಗಿ ಉತ್ತರಿಸುವಂತೆ ದೆಹಲಿ ಹೈಕೋರ್ಟ್ ನಮಗೆ ನೋಟಿಸ್ ನೀಡಿದೆ. ನ್ಯಾಯಾಲಯದ ಮುಂದೆ ಸತ್ಯವನ್ನು ಪ್ರಸ್ತುತಪಡಿಸಲು ನಾವು ಎದುರು ನೋಡುತ್ತಿದ್ದೇವೆ’ ಎಂದು ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ತಮ್ಮ ಮಗಳ ವಿರುದ್ಧದ ಆಧಾರ ರಹಿತ ಮತ್ತು ಸುಳ್ಳು ಆರೋಪಗಳಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರಾದ ಜೈರಾಂ ರಮೇಶ್, ಪವನ್ ಖೇರಾ, ನೆಟ್ಟ ಡಿಸೋಜಾ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಲೀಗಲ್ ನೋಟಿಸ್ ಕಳುಹಿಸಿದ್ದರು.

ಇವನ್ನೂ ಓದಿ..

ಸ್ಮೃತಿ ಅವರ ಮಗಳು ಎನ್ನುವ ಕಾರಣಕ್ಕಾಗಿ ಆರೋಪ: ಝೋಯಿಶ್ ಇರಾನಿ

ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿರುವ ಸ್ಮೃತಿ ಇರಾನಿ ಮಗಳು: ಕಾಂಗ್ರೆಸ್ ಆರೋಪ

ಸೋನಿಯಾ, ರಾಹುಲ್ ಲೂಟಿ ಪ್ರಸ್ತಾಪಿಸಿದ್ದಕ್ಕೆ ನನ್ನ ಮಗಳ ಮೇಲೆ ಆರೋಪ: ಸ್ಮೃತಿ

ಕಾಂಗ್ರೆಸ್ ನಾಯಕರಿಗೆ ಲೀಗಲ್ ನೋಟಿಸ್: ಕ್ಷಮೆಯಾಚನೆಗೆ ಸ್ಮೃತಿ ಆಗ್ರಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.