ನವದೆಹಲಿ: ರಾಜಿಂದರ್ ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಎಎಪಿ ಅಭ್ಯರ್ಥಿ ಗೆಲುವಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹರ್ಷ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ಬಿಜೆಪಿಯ ಕೊಳಕು ರಾಜಕಾರಣವನ್ನು ಜನರು ಸೋಲಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ.

ಜನರಿಗೆ ಧನ್ಯವಾದ ಅರ್ಪಿಸಿ ಟ್ವೀಟ್ ಮಾಡಿರುವ ಅವರು, ‘ರಾಜಿಂದರ್ ನಗರದ ಜನರಿಗೆ ಹೃತ್ಪೂರ್ವಕ ಧನ್ಯವಾದಗಳು. ದೆಹಲಿಯ ಜನರ ಈ ಅಪಾರ ಪ್ರೀತಿಗೆ ನಾನು ಕೃತಜ್ಞನಾಗಿದ್ದೇನೆ. ಇದು ನಮಗೆ ಹೆಚ್ಚು ಶ್ರಮಿಸಲು ಮತ್ತು ಜನರ ಸೇವೆ ಮಾಡಲು ಸ್ಫೂರ್ತಿ ನೀಡಲಿದೆ’ ಎಂದು ತಿಳಿಸಿದ್ದಾರೆ.

‘ಜನರು ಅವರ (ಬಿಜೆಪಿ) ಕೊಳಕು ರಾಜಕೀಯವನ್ನು ಸೋಲಿಸಿದ್ದಾರೆ. ನಮ್ಮ ಉತ್ತಮ ಕೆಲಸವನ್ನು ಮೆಚ್ಚಿದ್ದಾರೆ’ ಎಂದು ಅವರು ಟ್ವೀಟಿಸಿದ್ದಾರೆ.

ರಾಜಿಂದರ್ ನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ದುರ್ಗೇಶ್ ಪಾಠಕ್ ಅವರು ಗೆಲುವು ದಾಖಲಿಸಿದ್ದಾರೆ. ಪಾಠಕ್ ಅವರು ಬಿಜೆಪಿಯ ಅಭ್ಯರ್ಥಿ ರಾಜೇಶ್ ಭಾಟಿಯಾ ವಿರುದ್ಧ 11,000ಕ್ಕೂ ಹೆಚ್ಚು ಮತಗಳ ಅಂತರದ ಜಯ ಸಾಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.