ನವದೆಹಲಿ: ನೇಪಾಳದಲ್ಲಿ ಮಂಗಳವಾರ ತಡರಾತ್ರಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ ಎಂದು ವರದಿಯಾಗಿದೆ.

ನೇಪಾಳ ಗಡಿಯೊಂದಿಗೆ ಹೊಂದಿಕೊಂಡಿರುವ ಉತ್ತರಾಖಂಡದ ಪಿತೋರ್ಗಢ್ನ ಹಿಮಾಲಯ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಉತ್ತರ ಭಾರತದ ಹಲವೆಡೆ ಭೂಮಿ ನಡುಗಿದ ಅನುಭವವಾಗಿದೆ.

ನೇಪಾಳದಲ್ಲಿ ಉಂಟಾದ ಭೂಕಂಪನದ ಪರಿಣಾಮ ಗಾಜಿಯಾಬಾದ್, ಗುರುಗ್ರಾಮ ಮತ್ತು ಲಖನೌದಲ್ಲೂ ಮಧ್ಯರಾತ್ರಿ ಭೂಮಿ ನಡುಗಿದ್ದರಿಂದ ಜನರು ಭೀತಿಗೊಳಗಾಗಿದ್ದಾರೆ.

ಭೂಕಂಪನ ಉಂಟಾಗಿರುವ ಬಗ್ಗೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಟ್ವೀಟ್ ಮಾಡಿದ್ದು, ಎಲ್ಲರೂ ಸುರಕ್ಷಿತರಾಗಿರಿ ಎಂದು ತಿಳಿಸಿದ್ದಾರೆ.

ಜತೆಗೆ ಹಲವರು ಟ್ವೀಟ್ ಮಾಡಿ, ಭೂಮಿ ನಡುಗಿದ ಅನುಭವವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಆಳ– ಅಗಲ: ಮೂಲಸೌಕರ್ಯ ಕೊರತೆವಂದೇ ಭಾರತ್ ವೇಗಕ್ಕೆ ಹತ್ತಾರು ತಡೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.