ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6ರಂದು ಚುನಾವಣೆ ನಿಗದಿಯಾಗಿದ್ದು, ಜುಲೈ 5ರಂದು ಅಧಿಸೂಚನೆ ಹೊರಬೀಳಲಿದೆ ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ.

ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನ. ನಾಮಪತ್ರಗಳ ಪರಿಶೀಲನೆ ಜುಲೈ 20ರಂದು ನಡೆಯಲಿದ್ದು, ನಾಮಪತ್ರಗಳ ವಾಪಸಾತಿಗೆ ಜುಲೈ 22 ಕೊನೆಯ ದಿನವಾಗಿದೆ.ಮತದಾನ ಆಗಸ್ಟ್ 6ರಂದು ನಡೆಯಲಿದ್ದು, ಅಂದೇ ಮತ ಎಣಿಕೆಯೂ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

ಲೋಕಸಭಾ, ರಾಜ್ಯಸಭಾ ಸದಸ್ಯರು (ನಾಮ ನಿರ್ದೇಶಿತ ಸದಸ್ಯರೂ ಸೇರಿ) ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸುವರು.ಹಾಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರು ಸಭೆ ಸೇರಿ ಉಪರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.