ನವದೆಹಲಿ: ರಾಜ್ಯಸಭೆಯ 57 ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಿಗದಿ ಪಡಿಸಿರುವುದಾಗಿ ಚುನಾವಣಾ ಆಯೋಗ ಗುರುವಾರ ಪ್ರಕಟಿಸಿದೆ.

ಹದಿನೈದು ರಾಜ್ಯಗಳ 57 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 2022ರ ಜೂನ್–ಆಗಸ್ಟ್ ನಡುವೆ 57 ಸಂಸದರ ಸ್ಥಾನ ತೆರವಾಗಲಿವೆ.

ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ನಿರ್ಮಲಾ ಸೀತಾರಾಮನ್, ಜೈರಾಮ್ ರಮೇಶ್, ಕೆ.ಸಿ.ರಾಮಮೂರ್ತಿ ಹಾಗೂ ದಿವಂಗತ ಆಸ್ಕರ್ ಫರ್ನಾಂಡಿಸ್ (2021ರ ಸೆಪ್ಟೆಂಬರ್‌ನಿಂದ ತೆರವು) ಸೇರಿ ನಾಲ್ಕು ಸ್ಥಾನಗಳು ಜೂನ್ 30ರಂದು ತೆರವಾಗಲಿವೆ. ಉತ್ತರ ಪ್ರದೇಶದಿಂದ ಅತಿ ಹೆಚ್ಚು, 11 ಸಂಸದರು ನಿವೃತ್ತರಾಗಲಿದ್ದಾರೆ.

ಚುನಾವಣೆ ನಡೆಯಲಿರುವ ಜೂನ್ 10ರಂದು ಸಂಜೆ 5ಕ್ಕೆ ಮತ ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಮೇ 31 ಕೊನೆಯ ದಿನವಾಗಿದೆ.

ಇದನ್ನೂ ಓದಿ–ಪರಿಷತ್ನ ನಾಲ್ಕು ಸ್ಥಾನಗಳ ಚುನಾವಣೆಗೆ ದಿನಾಂಕ ಘೋಷಣೆ: ಜೂನ್ 15ಕ್ಕೆ ಫಲಿತಾಂಶ

ರಾಜ್ಯಸಭೆಯ ಸ್ಥಾನಗಳು ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಮುಖ ಪಾತ್ರವಹಿಸಲಿವೆ. ಲೋಕಸಭೆ ಮತ್ತು ರಾಜ್ಯಸಭೆಯ ಒಟ್ಟು 776 ಸಂಸದರು, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 4,120 ಶಾಸಕರು ರಾಷ್ಟ್ರಪತಿ ಆಯ್ಕೆಗೆ ಮತದಾನ ಮಾಡುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.