ನವದೆಹಲಿ: ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯ ಹೆಚ್ಚಿಸುವ ಸಂಬಂಧ ವಿದ್ಯಾರ್ಥಿಗಳ ಸೇವಾ ಕೇಂದ್ರಗಳ (ಎಸ್‌ಎಸ್‌ಸಿ) ಸ್ಥಾಪಿಸಬೇಕು ಎಂಬುದು ಸೇರಿದಂತೆ ಹಲವು ನೂತನ ಮಾರ್ಗಸೂಚಿಗಳನ್ನು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಸಿದ್ಧಪಡಿಸಿದೆ.

‘ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಉತ್ಸಾಹಭರಿತ, ಕ್ರಿಯಾಶೀಲ ಕ್ಯಾಂಪಸ್‌ಗಳನ್ನು ಹೊಂದಬೇಕು ಎಂಬುದೇ ಈ ನೂತನ ಮಾರ್ಗಸೂಚಿಗಳ ರಚನೆಯ ಉದ್ದೇಶ’ ಎಂದು ಯುಜಿಸಿ ಚೇರಮನ್ ಜಗದೀಶಕುಮಾರ್ ತಿಳಿಸಿದ್ದಾರೆ.

‘ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳಬೇಕು. ಸಕಾರಾತ್ಮಕ ಮನೋಭಾವ ಬೆಳೆಸಿಕೊಳ್ಳುವುದು, ಇತರರಿಗೆ ನೆರವು ನೀಡಲು ತಮ್ಮದೇ ಆದ ಗುಂಪು ಕಟ್ಟಿಕೊಳ್ಳುವ ಮೂಲಕ ಅವರ ವ್ಯಕ್ತಿತ್ವದಲ್ಲಿ ಸರ್ವತೋಮುಖ ಅಭಿವೃದ್ಧಿ ಸಾಧಿಸುವುದೇ ಈ ನಡೆಯ ಉದ್ದೇಶ’ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಓದಿ...ರಾಜಸ್ಥಾನ, ಬಂಗಾಳ, ಮಹಾರಾಷ್ಟ್ರಕ್ಕೆ ಕಲ್ಲಿದ್ದಲು ಪೂರೈಕೆ ಕುಂಠಿತ: ಕಾರಣವೇನು?

‘ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಉತ್ತಮವಾಗಿರಬೇಕು. ಆ ಮೂಲಕ ಒತ್ತಡ ಹಾಗೂ ನಡತೆಗೆ ಸಂಬಂಧಿಸಿ ಎದುರಾಗುವ ಸಮಸ್ಯೆಗಳನ್ನು ಅವರು ಸಮರ್ಥವಾಗಿ ಎದುರಿಸುವಂತಾಗಬೇಕು ಎಂಬುದು ಸಹ ಈ ನೂತನ ಮಾರ್ಗಸೂಚಿಗಳ ಉದ್ದೇಶವಾಗಿದೆ’ ಎಂದು ಅವರು ಹೇಳಿದ್ದಾರೆ.

‘ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡೆ, ದೈಹಿಕ ಸಾಮರ್ಥ್ಯ ಹೆಚ್ಚಳಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಿವೆ, ಮಾನವ ಸಂಪನ್ಮೂಲ ಇದೆ. ಆದರೆ, ದೈಹಿಕ ಚಟುವಟಿಕೆಗಳು ಕಡ್ಡಾಯ ಇಲ್ಲ. ಈ ನ್ಯೂನತೆಯನ್ನು ಸರಿಪಡಿಸಬೇಕು’ ಎಂದು ಯುಜಿಸಿ ರೂಪಿಸಿರುವ ಈ ಮಾರ್ಗಸೂಚಿಗಳಲ್ಲಿ ಹೇಳಲಾಗಿದೆ.

ನೂತನ ಮಾರ್ಗಸೂಚಿಯ ಮುಖ್ಯಾಂಶಗಳು

* ಉತ್ತಮ ಬೋಧನಾ–ಕಲಿಕಾ ಪರಿಸರ ನಿರ್ಮಾಣವಾಗಬೇಕು

* ಎಲ್ಲರಿಗೂ ಸಮಾನ ಅವಕಾಶಗಳು ಸಿಗುವಂತಾಗಬೇಕು

* ಸಹಪಠ್ಯ ಚಟುವಟಿಕೆ, ಸಮಾಜಮುಖಿ ಕಾರ್ಯಗಳಿಗೆ ಒತ್ತು

* ತರಬೇತಿ, ಉದ್ಯೋಗ ಪಡೆಯಲು ಮಾರ್ಗದರ್ಶನ ನೀಡುವುದು

* ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ, ಮಹಿಳೆ ಉತ್ತೇಜನ

ಓದಿ...ಮೋದಿ ಮಾಧ್ಯಮಗಳ ಮೈಕ್ ಕಂಡರೆ ಎಕೆ–47 ಗನ್ ಕಂಡಂತೆ ಹೆದರುತ್ತಾರೆ: ಕಾಂಗ್ರೆಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.