ಲಖನೌ: ಪಿಸ್ತೂಲ್ ತೋರಿಸಿ ಜೈಲು ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠದ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಈ ತೀರ್ಪು ನೀಡಿದ್ದಾರೆ.

2003ರಲ್ಲಿ ಜೈಲಿನಲ್ಲಿದ್ದ ಅನ್ಸಾರಿ ಭೇಟಿಗೆ ಬಂದಿದ್ದ ಜನರನ್ನು ತಪಾಸಣೆ ನಡೆಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ನನಗೆ ಬೆದರಿಕೆ ಹಾಕಲಾಗಿದೆ ಎಂದು ಜೈಲು ಅಧಿಕಾರಿ ಎಸ್.ಕೆ. ಅಶ್ವಥಿ ಅವರು, ಅಲಂಬಾಗ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಅಲ್ಲದೆ, ಅನ್ಸಾರಿ ನನಗೆ ಪಿಸ್ತೂಲ್ ಸಹ ತೋರಿಸಿದ್ದರು ಎಂದು ಅಶ್ವಥಿ ಆರೋಪಿಸಿದ್ದರು.

ವಿಚಾರಣಾ ನ್ಯಾಯಾಲಯವು ಅನ್ಸಾರಿ ಅವರನ್ನು ಖುಲಾಸೆಗೊಳಿಸಿತ್ತು. ಆದರೆ, ಉತ್ತರ ಪ್ರದೇಶ ಸರ್ಕಾರವು ಹೈಕೋರ್ಟ್ ಆದೆಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.