ನವದೆಹಲಿ/ಪುಣೆ: ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಪ್ರಮುಖ ಸಂಚುಕೋರ ಎಂದು ದೆಹಲಿ ಪೊಲೀಸರು ಬುಧವಾರ ಹೇಳಿದ್ದಾರೆ.

ಈ ಹತ್ಯೆಯಲ್ಲಿ ಪ್ರಮುಖ ಶೂಟರ್ನ ಸಹಚರನ ಪಾತ್ರವೂ ಇದೆ ಎಂದು ಪೊಲೀಸ್ ಆಯುಕ್ತ (ವಿಶೇಷ ಘಟಕ) ಎಚ್.ಎಸ್.ಧಲಿವಾಲ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಐವರು ಆರೋಪಿಗಳನ್ನು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಲಾರೆನ್ಸ್ ಸಂಬಂಧಿ ಸಚಿನ್ ಬಿಷ್ಣೋಯಿ ಎಂಬಾತನ ಪಾತ್ರವಿರುವ ಬಗ್ಗೆ ಮಾಹಿತಿ ಲಭಿಸಿದೆ’ ಎಂದೂ ಅವರು ಹೇಳಿದರು.

ಬಂಧನ: ಮಹಾರಾಷ್ಟ್ರ ಪೊಲೀಸರೊಂದಿಗೆ ಪುಣೆಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂಸೆವಾಲಾ ಹತ್ಯೆಗೆ ಸಂಬಂಧಿಸಿ ಸಿದ್ಧೇಶ್ ಕಾಂಬ್ಳೆ ಎಂಬುವವರನ್ನು ಬಂಧಿಸಲಾಗಿದೆ. ಕಾಂಬ್ಳೆ ಕೂಡ ಬಿಷ್ಣೋಯಿ ಗ್ಯಾಂಗ್ ಸದಸ್ಯ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.