ಮುಂಬೈ: ಮಹಾರಾಷ್ಟ್ರದ ಬದ್ಲಾಪುರದ ರಾಸಾಯನಿಕ ಕಾರ್ಖಾನೆಯಲ್ಲಿ ತಡರಾತ್ರಿ ಅನಿಲ ಸೋರಿಕೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿತ್ತು.

ಶಿರ್ಗಾಂವ್ ಎಂಐಡಿಸಿಯ ನೊಬೆಲ್ ಇಂಟರ್ಮೀಡಿಯೇಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಅನಿಲ ಸೋರಿಕೆಯಾದ ನಂತರ ಮೂರು ಕಿಲೋಮೀಟರ್ ಪ್ರದೇಶಕ್ಕೆ ವ್ಯಾಪಿಸಿದ್ದು, ಉಸಿರಾಟ ಸಮಸ್ಯೆ ಮತ್ತು ಕಣ್ಣುಗಳಲ್ಲಿ ಉರಿಯುತ್ತಿರುವ ಬಗ್ಗೆ ಜನರು ದೂರಿದ್ದಾರೆ.

ರಾತ್ರಿ 10ಗಂಟೆ ಸುಮಾರಿಗೆ ಸಂಭವಿಸಿದ ಅನಿಲ ಸೋರಿಕೆ ದುರಂತವು 1 ಗಂಟೆ ಒಳಗೆ ತಹಬದಿಗೆ ಬಂದಿದೆ. 11 ಗಂಟೆ ಸುಮಾರಿಗೆ ಅಗ್ನಿಸಾಮಕ ದಳದ ಸಿಬ್ಬಂದಿ ಅನಿಲ ಸೋರಿಕೆಯನ್ನು ತಡೆಹಿಡಿದಿದೆ. ಯಾರಿಗೂ ಅಪಾಯವಾಗಿಲ್ಲ ಎಂದು ಥಾಣೆ ಮಹಾನಗರ ಪಾಲಿಕೆ ತಿಳಿಸಿದೆ.

ಅನಿಲ ಸೋರಿಕೆಯಿಂದ ಸಮಸ್ಯೆ ಎದುರಿಸಿದ ಕೆಲವರನ್ನು ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಎಎನ್ಐ ಟ್ವೀಟ್ ಮಾಡಿರುವ ವಿಡಿಯೊದಲ್ಲಿ ಜನರು ಮುಖ ಮುಚ್ಚಿಕೊಂಡು ಓಡಾಡುತ್ತಿರುವ ದೃಶ್ಯ ಕಂಡುಬಂದಿದೆ. ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಪೊಲೀಸರು ಜನರಿಗೆ ಭರವಸೆ ನೀಡಿದ್ದಾರೆ.

ವಿಶಾಖಪಟ್ಟಣದಲ್ಲಿ ಸಂಭವಿಸಿದ ಅನಿಲ ದುರಂತ ಪ್ರಕರಣದಲ್ಲಿ ಹಲವರು ಅಸುನೀಗಿದ್ದರು. ಇದಾದ ಕೆಲವೇ ತಿಂಗಳುಗಳಲ್ಲಿ ಅನಿಲ ಸೋರಿಕೆ ಪ್ರಕರಣಗಳು ಪದೇ ಪದೇ ವರದಿಯಾಗುತ್ತಿದ್ದು, ಆತಂಕಕ್ಕೆ ಎಡೆಮಾಡಿದೆ.

ಕೊರೊನಾ ವೈರಸ್| ವಿಯೆಟ್ನಾಮ್ನಲ್ಲಿ ಪತ್ತೆಯಾಗಿದ್ದು ಭಾರತ ಮಾದರಿಯ ಮತ್ತೊಂದು ತಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.