ನವದೆಹಲಿ: 29ನೇ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರು ಶನಿವಾರ ಅಧಿಕಾರ ವಹಿಸಿಕೊಂಡರು.

ಈ ಹಿಂದೆ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ಎಂ.ಎಂ.ನರವಣೆ ಅವರು ಮೂರೂ ಸೇನಾಪಡೆಗಳ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥರಾಗಿ ಮನೋಜ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ.

ಉಪ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ಜನರಲ್ ಪಾಂಡೆ, 'ಕಾರ್ಪ್ಸ್ ಆಫ್ ಇಂಜಿನಿಯರ್ಸ್'ನ ಮೊದಲ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಜನರಲ್ ಪಾಂಡೆ ಅವರು ಅಂಡಮಾನ್ ಮತ್ತು ನಿಕೋಬಾರ್ನ ಕಮಾಂಡರ್-ಇನ್-ಚೀಫ್ ಆಗಿ ಸೇವೆ ಸಲ್ಲಿಸಿದ್ದಾರೆ.

ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿರುವ ಅವರು ಡಿಸೆಂಬರ್ 1982 ರಲ್ಲಿ ಕಾರ್ಪ್ಸ್ ಆಫ್ ಇಂಜಿನಿಯರ್ಸ್ಗೆ (ದಿ ಬಾಂಬೆ ಸ್ಯಾಪರ್ಸ್) ನೇಮಕಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.