ನವದೆಹಲಿ: ಹೊಸ ವಾಹನಗಳಿಗೆ ‘ಭಾರತ್ ಸರಣಿ’ (ಬಿಎಚ್–ಸಿರೀಸ್) ಎನ್ನುವ ಹೊಸ ನೋಂದಣಿ ವ್ಯವಸ್ಥೆಯನ್ನು ರೂಪಿಸಲಾಗಿದೆ. ಇದನ್ನು ಹೊಂದಿರುವ ವಾಹನ ಮಾಲೀಕರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸ್ಥಳಾಂತರಗೊಂಡಾಗ ಅಲ್ಲಿ ಮರು ನೋಂದಣಿ ಮಾಡುವ ಅಗತ್ಯ ಇರುವುದಿಲ್ಲ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಶನಿವಾರ ತಿಳಿಸಿದೆ.

ರಕ್ಷಣಾ ಸಿಬ್ಬಂದಿ, ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಿಗಳು, ಸರ್ಕಾರಿ ಸ್ವಾಮ್ಯದ ಕಂಪನಿಗಳು ಹಾಗೂ ನಾಲ್ಕು ಅಥವಾ ಅದಕ್ಕಿಂತ ಹೆಚ್ಚಿನ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಚೇರಿಗಳನ್ನು ಹೊಂದಿರುವ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಈ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಸ್ವಯಂ ಪ್ರೇರಿತವಾಗಿ ಈ ಸೌಲಭ್ಯ ಬಳಸಿಕೊಳ್ಳಬಹುದು ಎಂದು ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ಕೇಂದ್ರ ಮೋಟಾರು ವಾಹನಗಳ (12ನೇ ತಿದ್ದುಪಡಿ) ನಿಯಮವು ಸೆಪ್ಟೆಂಬರ್ 15ರಿಂದ ಜಾರಿಗೆ ಬರಲಿದೆ. ಬಿಎಚ್–ಸರಣಿಯ ವಾಹನಗಳಿಗೆ ನೋಂದಣಿಯನ್ನು ಜಾಲತಾಣದ ಮೂಲಕ ಮಾಡಲಾಗುತ್ತದೆ ಎಂದು ತಿಳಿಸಿದೆ.

ಸದ್ಯ ಇರುವ ನಿಯಮದ ಪ್ರಕಾರ, ಯಾವುದೇ ವಾಹನ ಮಾಲೀಕರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸ್ಥಳಾಂತರಗೊಂಡಾಗ ಸ್ಥಳಾಂತರಗೊಂಡ ರಾಜ್ಯದಲ್ಲಿ 12 ತಿಂಗಳ ಒಳಗಾಗಿ ಮರು ನೋಂದಣಿ ಮಾಡಿಕೊಳ್ಳಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.