ಜಮ್ಮು: ’ಕೃಷಿ ಮತ್ತು ಕೈಗಾರಿಕಾ ಉತ್ಪನ್ನಗಳ ರಫ್ತು ಸಾಮರ್ಥ್ಯವನ್ನು ಸದುಪಯೋಗ ಮಾಡಿಕೊಳ್ಳುವುದಕ್ಕಾಗಿ ಕೇಂದ್ರ ಸರ್ಕಾರವು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಹಯೋಗದಲ್ಲಿ ದೇಶದ ಎಲ್ಲ ಜಿಲ್ಲೆಗಳಲ್ಲೂ ’ಜಿಲ್ಲಾ ರಫ್ತು ಕೇಂದ್ರ’(ಡಿಇಎಚ್) ಸ್ಥಾಪಿಸಲು ಮುಂದಾಗಿದೆ’ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ರಾಜ್ಯ ಸಚಿವೆ ಅನುಪ್ರಿಯ ಸಿಂಗ್ ಪಟೇಲ್ ಹೇಳಿದರು.

ಕೇಂದ್ರ ಸರ್ಕಾರದ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಎರಡು ದಿನಗಳ ಪ್ರವಾಸಕ್ಕಾಗಿ ರಜೌರಿ ಜಿಲ್ಲೆಗೆ ಭೇಟಿ ನೀಡಿದ್ದ ಸಚಿವರು ಮಂಗಳವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

’ಡಿಇಎಚ್’ ಯೋಜನೆಯ ಅಡಿಯಲ್ಲಿ, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಜಿಲ್ಲಾ ರಫ್ತು ಪ್ರಚಾರ ಸಮಿತಿಗಳನ್ನು ರಚಿಸಲಾಗಿದೆ. ರಫ್ತು ಸಾಮರ್ಥ್ಯವಿರುವ ಉತ್ಪನ್ನಗಳು ಮತ್ತು ಸೇವೆಗಳನ್ನೂ ಗುರುತಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.ಕೈಗಾರಿಕಾ ಭೂ ಬ್ಯಾಂಕ್ ಸ್ಥಾಪಿಸಲಾಗಿದ್ದು, ಸುಮಾರು 6ಸಾವಿರ ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪಟೇಲ್ ಮಾಹಿತಿ ನೀಡಿದರು.

ಜಮ್ಮು ಮತ್ತು ಕಾಶ್ಮೀರವು ಸಮೃದ್ಧಿಯ ಹೊಸ ಯುಗದತ್ತ ಸಾಗುತ್ತಿದ್ದು, ಸಕಾರಾತ್ಮಕ ಬದಲಾವಣೆಯ ಅಲೆಯೂ ಕಾಣುತ್ತಿದೆ. ಸರ್ಕಾರ ಕೂಡ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಹಲವಾರು ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಜೊತೆಗೆ ಇಲ್ಲಿನ ಜನರನ್ನು ಸಬಲೀಕರಣಗೊಳಿಸುತ್ತಿದೆ’ ಎಂದು ಸಚಿವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.