ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಡಳಿತಾರೂಢ ಬಿಜೆಪಿ 156 ಸ್ಥಾನ ಗೆದ್ದು ಮತ್ತೆ ಅಧಿಕಾರದ ಗದ್ದುಗೆ ಏರಿದೆ.

<caption>ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ 2022</caption>

ಪಕ್ಷ

ಗೆಲುವು

ಮುನ್ನಡೆ

ಒಟ್ಟು

ಆಮ್ ಆದ್ಮಿ ಪಕ್ಷ

5

0

5

ಭಾರತೀಯ ಜನತಾ ಪಕ್ಷ

156

0

156

ಪಕ್ಷೇತರರು

3

0

3

ಕಾಂಗ್ರೆಸ್

17

17

ಸಮಾಜವಾದಿ ಪಕ್ಷ

1

0

1

ಒಟ್ಟು

180

18

182

ಐತಿಹಾಸಿಕ ವಿಜಯ

2002ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 127 ಸ್ಥಾನಗಳನ್ನು ಗೆದ್ದಿರುವುದು ಈವರೆಗಿನ ಸರ್ವಶ್ರೇಷ್ಠ ಸಾಧನೆಯಾಗಿದೆ. ಅಷ್ಟೇ ಅಲ್ಲದೆ 1985ರಲ್ಲಿ ಕಾಂಗ್ರೆಸ್ನ ಮಾಧವಸಿನ್ಹಸೋಲಂಕಿಸರ್ಕಾರದ ಸಂಖ್ಯಾಬಲವನ್ನು ಬಿಜೆಪಿ ಹಿಮ್ಮೆಟ್ಟಿಸಲಿದೆ. ಅಂದು ಕಾಂಗ್ರೆಸ್ ಸರ್ಕಾರವು 149 ಸ್ಥಾನಗಳನ್ನು ಗೆದ್ದಿತ್ತು.

2017ಕ್ಕೆ ಹೋಲಿಸಿದರೆ ಉತ್ತಮ ಸಾಧನೆ ಮಾಡಿರುವ ಬಿಜೆಪಿ ಸತತ ಏಳನೇ ಅವಧಿಗೆ ಅಧಿಕಾರ ಹಿಡಿಯುತ್ತಿದೆ. ಈ ಮೂಲಕ ಪಶ್ಚಿಮ ಬಂಗಾಳದ ಎಡರಂಗ ಸರ್ಕಾರದ ದಾಖಲೆಯನ್ನು ಸರಿಗಟ್ಟಲಿದೆ. ಪಶ್ಚಿಮ ಬಂಗಾಳದಲ್ಲಿ 1977ರಿಂದ 2011ರ ಅವಧಿಗೆ ಎಡರಂಗದ ಸರ್ಕಾರ ಗದ್ದುಗೆಗೇರಿತ್ತು.

ಮುಖ್ಯಮಂತ್ರಿ ಪಟೇಲ್ಗೆಭಾರಿ ಜಯ

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಘಟ್ಲೋಡಿಯಾ ಕ್ಷೇತ್ರದಲ್ಲಿ1,92,263 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಗೆಲುವಿನ ಶ್ರೇಯ ಮೋದಿಗೆ ಸಲ್ಲಬೇಕು: ಆದಿತ್ಯನಾಥ್

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಗೆಲುವಿನ ಶ್ರೇಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

ಎಎಪಿ ಮುಖ್ಯಮಂತ್ರಿ ಅಭ್ಯರ್ಥಿಗೆ ಸೋಲು

ಗುಜರಾತ್ ವಿಧಾನಸಭೆ ಚುನಾವಣೆ ವೇಳೆ ಆಮ್ ಆದ್ಮಿ ಪಕ್ಷವು (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದ ಈಸುದಾನ್ ಗಢವಿ ಅವರುಸೋಲು ಕಂಡಿದ್ದಾರೆ.

ಜಡೇಜ ಪತ್ನಿಗೆ ಗೆಲುವು...

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಜಾಮ್ನಗರ (ಉತ್ತರ) ಕ್ಷೇತ್ರದಿಂದ ಸ್ಪರ್ಧಿಸಿರುವ ಕ್ರಿಕೆಟಿಗ ರವೀಂದ್ರ ಜಡೇಜ ಅವರ ಪತ್ನಿ, ಬಿಜೆಪಿ ಅಭ್ಯರ್ಥಿ ರಿವಾಬಾ ಜಡೇಜ ಭರ್ಜರಿ ಗೆಲುವು ದಾಖಲಿಸಿದ್ದಾರೆ.ರಿವಾಬಾ ಜಡೇಜ ಅವರು ತಮ್ಮ ಸಮೀಪದ ಸ್ಪರ್ಧಿ ಆಮ್ ಆದ್ಮಿ ಪಕ್ಷದ ಕರ್ಸನ್ ಕರ್ಮುರ್ ಅವರನ್ನು 40,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದರು.

ಹಾರ್ದಿಕ್ ಪಟೇಲ್ಗೆ ಗೆಲುವು...

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಹಾರ್ದಿಕ್ ಪಟೇಲ್ ಗೆಲುವು ದಾಖಲಿಸಿದ್ದಾರೆ. ವೀರಂಗಂ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿದ ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಅವರು ತಮ್ಮ ಸಮೀಪದ ಸ್ಪರ್ಧಿಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಅಮರ್ಸಿಂಗ್ ಠಾಕೂರ್ ಅವರನ್ನು ಸೋಲಿಸಿದರು.

ಮತದಾನ...
182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಇಂದು (ಡಿ.8) ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.

2017ರಲ್ಲಿ ಏನಾಗಿತ್ತು?
ಕಳೆದ ಬಾರಿ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 99, ಕಾಂಗ್ರೆಸ್ 77 ಮತ್ತು ಎನ್ಸಿಪಿ 1 ಸ್ಥಾನಗಳಲ್ಲಿ ಗೆಲುವು ದಾಖಲಿಸಿತ್ತು.

ಮೇವಾನಿಗೆ ಜಯ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರು ವಡಗಾವ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ಅವರು93,848 ಮತ ಗಳಿಸಿಕೊಂಡಿದ್ದಾರೆ. ಅವರ ಸಮೀಪದ ಸ್ಪರ್ಧಿಎಂ.ಜೆ. ವಘೇಲಾ89,052 ಪಡೆದು ಅಲ್ಪ ಅಂತರದಿಂದ ಸೋಲು ಕಂಡಿದ್ದಾರೆ.

ಈ ಗೆಲುವು ನನ್ನ ಜವಾಬ್ದಾರಿಯನ್ನು ಹೆಚ್ಚು ಮಾಡಿದೆ ಎಂದು ಫಲಿತಾಂಶದ ಬಳಿಕ ಟ್ವೀಟ್ ಮಾಡಿರುವ ಮೇವಾನಿ, ಕ್ಷೇತ್ರದ ಜನರಿಗೆ ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ:
LIVE | ವಿಧಾನಸಭೆ ಚುನಾವಣೆ ಫಲಿತಾಂಶ: ಗುಜರಾತ್ನಲ್ಲಿ ಬಿಜೆಪಿ, ಹಿಮಾಚಲದಲ್ಲಿ ಕಾಂಗ್ರೆಸ್ ಮುನ್ನಡೆ
Himachal Pradesh Results Highlights: ಬಿಜೆಪಿ–ಕಾಂಗ್ರೆಸ್ ನಡುವೆ ಪೈಪೋಟಿ
Gujarat Election Results: 7ನೇ ಬಾರಿ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಸಜ್ಜು
Gujarat Election Results: ಹಾರ್ದಿಕ್ ಪಟೇಲ್ಗೆ ಅಲ್ಪ ಮುನ್ನಡೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.