ನವದೆಹಲಿ:ಪ್ರವಾದಿ ಮಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆನೀಡಿದ್ದಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ.

ಪ್ರವಾದಿ ಕುರಿತು ತಾವು ನೀಡಿರುವ ಹೇಳಿಕೆಯನ್ನು ವಿರೋಧಿಸಿ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ವಿಚಾರಣೆಗಳನ್ನು ದೆಹಲಿಗೆ ವರ್ಗಾಯಿಸುವಂತೆ ಕೋರಿ ಶರ್ಮಾ ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ಜೆ.ಬಿ. ಪರ್ದಿವಾಲಾ ಅವರಿದ್ದ ಪೀಠ, ಮನವಿಯನ್ನು ತಿರಸ್ಕರಿಸಿದ್ದು,ಅರ್ಜಿ ಹಿಂಪಡೆಯಲು ಕಾಲಾವಕಾಶ ನೀಡಿದೆ.

ಪ್ರವಾದಿ ಕುರಿತ ಶರ್ಮಾ ಹೇಳಿಕೆ ತುಂಬಾ ಗೊಂದಲ ಮತ್ತು ದುರಹಂಕಾರದಿಂದ ಕೂಡಿದ್ದಾಗಿದೆ. ಅವರಿಗೆ ಅಂತಹ ಹೇಳಿಕೆ ನೀಡುವ ಅಗತ್ಯವೇನಿತ್ತು? ಇದು ದೇಶದಲ್ಲಿ ದುರದೃಷ್ಟಕರ ಘಟನೆಗಳಿಗೆ ಕಾರಣವಾಗಿದೆ. ಇಂಥವರಿಗೆ ಇತರ ಧರ್ಮಗಳ ಬಗ್ಗೆ ಗೌರವವಿಲ್ಲ. ಅಗ್ಗದ ಪ್ರಚಾರಕ್ಕಾಗಿ ಅಥವಾ ರಾಜಕೀಯ ಅಜೆಂಡಾ ಅಥವಾ ಇತರ ದುರುದ್ದೇಶಗಳಿಗಾಗಿ ಇಂತಹ ಹೇಳಿಕೆಗಳನ್ನು ನೀಡಲಾಗಿದೆ ಎಂದು ಪೀಠವು ವಿಚಾರಣೆಯ ಸಮಯದಲ್ಲಿ ಹೇಳಿದೆ.

'ಅವರ ಹಿಡಿತವಿಲ್ಲದ ನಾಲಿಗೆ ಇಡೀ ದೇಶಕ್ಕೇ ಬೆಂಕಿ ಹಚ್ಚಿದೆ.ದೇಶದ ಭದ್ರತೆಗೇ ಆತಂಕ ಉಂಟುಮಾಡಿದೆ' ಎಂದು ಕಳವಳ ವ್ಯಕ್ತಪಡಿಸಿರುವ ಪೀಠ, ಶರ್ಮಾ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಹೇಳಿದೆ.

ಇವನ್ನೂ ಓದಿ
*ನೂಪುರ್ ಪರ ಪೋಸ್ಟ್: ರಾಜಸ್ಥಾನದಲ್ಲಿ ವ್ಯಕ್ತಿಯ ಶಿರಚ್ಛೇದ, ಪ್ರಧಾನಿಗೂ ಬೆದರಿಕೆ
*ರಾಜಸ್ಥಾನ: ನೂಪುರ್ ಬೆಂಬಲಿಸಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ಹತ್ಯೆ, ಇಬ್ಬರ ಬಂಧನ
*ರಾಜಸ್ಥಾನ: ಭೀಕರ ಹತ್ಯೆ ಬಳಿಕ ಭುಗಿಲೆದ್ದ ಪ್ರತಿಭಟನೆ, ಇಂಟರ್ನೆಟ್ ಸೇವೆ ಸ್ಥಗಿತ
*ವಿವಾದಾತ್ಮಕ ಹೇಳಿಕೆ ಪ್ರಕರಣ: ವಿಚಾರಣೆಗೆ ಹಾಜರಾಗದ ನೂಪುರ್ ಶರ್ಮಾ
*ರಾಜಸ್ಥಾನ: ಉದಯಪುರ ಹತ್ಯೆಗೆ ಕಾಂಗ್ರೆಸ್ ನಾಯಕ ರಾಹುಲ್, ಪ್ರಿಯಾಂಕಾ ತೀವ್ರ ಖಂಡನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.