ನವದೆಹಲಿ: ಸ್ವದೇಶಿ ನಿರ್ಮಿತ ಮೊದಲ ವಿಮಾನವಾಹಕ ಯುದ್ಧ ನೌಕೆ (ಐಎಸಿ) ವಿಕ್ರಾಂತ್ ಬುಧವಾರ ಸಮುದ್ರದಲ್ಲಿ ತನ್ನ ಮೊದಲ ಪ್ರಯೋಗಾರ್ಥ ಸಂಚಾರ ಆರಂಭಿಸಿತು.

ದೇಶದ ಅತಿದೊಡ್ಡ ಮತ್ತು ಅತ್ಯಂತ ಸಂಕೀರ್ಣದಿಂದ ಕೂಡಿರುವ ಯುದ್ಧ ನೌಕೆ ಇದಾಗಿದ್ದು, ಸಂಚಾರ ಆರಂಭಿಸಿದ ಈ ದಿನಭಾರತೀಯ ನೌಕಾಪಡೆಯ ಪಾಲಿಗೆ ಐತಿಹಾಸಿಕ ದಿನವೆಂದು ಬಣ್ಣಿಸಲಾಗಿದೆ.

ಅತ್ಯಾಧುನಿಕ ವಿಮಾನವಹಕ ಯುದ್ಧ ನೌಕೆಯನ್ನು ದೇಶೀಯವಾಗಿ ವಿನ್ಯಾಸಗೊಳಿಸಿ, ನಿರ್ಮಿಸಿ, ಸಂಯೋಜಿಸಲಾಗಿದೆ. ಈ ಮೂಲಕ ಭಾರತವು ಜಗತ್ತಿನಲ್ಲಿ ಇಂಥ ಸಾಮರ್ಥ್ಯ ಹೊಂದಿರುವ ಕೆಲವೇ ಕೆಲವು ದೇಶಗಳ ಗುಂಪಿಗೆ ಸೇರಿದಂತಾಗಿದೆ ಎಂದು ನೌಕಾಪಡೆ ತಿಳಿಸಿದೆ.

50 ವರ್ಷಗಳ ಹಿಂದೆ 1971ರ ಯುದ್ಧದಲ್ಲಿ ಇದೇ ಹೆಸರಿನ ಈ ಮೊದಲಿನ ವಿಮಾನವಾಹಕ ಯುದ್ಧನೌಕೆ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತ್ತು.ಮುಂದಿನ ವರ್ಷದ ದ್ವಿತೀಯಾರ್ಧದಲ್ಲಿ ಈ ಯುದ್ಧ ನೌಕೆ ಭಾರತೀಯ ನೌಕಾಪಡೆ ಸೇರ್ಪಡೆಗೊಳ್ಳಲಿದೆ.

‘ಆತ್ಮನಿರ್ಭರ ಭಾರತ್’ (ಸ್ವಾವಲಂಬಿ ಭಾರತ) ಮತ್ತು ‘ಮೇಕ್ ಇನ್ ಇಂಡಿಯಾ’ ಭಾಗವಾಗಿ ಕೈಗೊಂಡ ಈ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ ಎಂದು ಭಾರತೀಯ ನೌಕಾಪಡೆಯ ವಕ್ತಾರ ಕಮಾಂಡರ್ ವಿವೇಕ್ ಮಧ್ವಲ್ ಹೇಳಿದರು.

ಅಫ್ಗಾನಿಸ್ತಾನ: ರಕ್ಷಣಾ ಸಚಿವರನ್ನು ಗುರಿಯಾಗಿಸಿಕೊಂಡು ಬಾಂಬ್ ದಾಳಿ, 8 ಸಾವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.