ನವದೆಹಲಿ: ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ವಾಯುಪಡೆಯ ಎಂಐ–17ವಿ5 ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ಕೂನೂರಿನ ಸಮೀಪ ಪತನಗೊಂಡಿದೆ. ರಾವತ್ ಸೇರಿದಂತೆ 14 ಮಂದಿ ಹೆಲಿಕಾಪ್ಟರ್ನಲ್ಲಿದ್ದರು ಎನ್ನುವ ಮಾಹಿತಿ ಇದ್ದು, 13 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಹೆಲಿಕಾಪ್ಟರ್ ಪತನವಾಗಲು ನಿಖರ ಕಾರಣ ಈವರೆಗೂ ತಿಳಿದು ಬಂದಿಲ್ಲ. ಹೆಲಿಕಾಪ್ಟರ್ ಹಾರಾಟ ನಡೆಸಿದ್ದ ಮಾರ್ಗದಲ್ಲಿ ದಟ್ಟ ಮಂಜು ಆವರಿಸಿದ್ದ ಕಾರಣ ಸಂಚಾರ ಮಾರ್ಗದ ಗೋಚರತೆಯಲ್ಲಿ ಉಂಟಾಗಿರುವ ಅಸ್ಪಷ್ಟತೆಯಿಂದ ಅಪಘಾತ ಸಂಭವಿಸಿರಬಹುದು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ 13 ಮಂದಿ ಸಾವಿಗೀಡಾಗಿರುವುದು ಖಚಿತ ಪಟ್ಟಿರುವುದಾಗಿ ಎಎನ್ಐ ಟ್ವೀಟಿಸಿದೆ.

ಡಿಎನ್ಎ ಪರೀಕ್ಷೆ ನಡೆಸುವ ಮೂಲಕ ಮೃತ ದೇಹಗಳ ಗುರುತು ಖಚಿತಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:Live | ಊಟಿ ಬಳಿಯ ಕೂನೂರಿನಲ್ಲಿ ಐಎಎಫ್ ಹೆಲಿಕಾಪ್ಟರ್ ಪತನ: ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿಯ ಬಗ್ಗೆ ದೊರೆಯದ ಮಾಹಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.