ನವದೆಹಲಿ: ‘ಭಾರತದಲ್ಲಿ ಈವರೆಗೆ 75 ಕೋಟಿ ಕೋವಿಡ್ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಈ ಮೂಲಕ ಮಹತ್ವದ ಹೆಗ್ಗುರುತನ್ನು ದಾಟಲಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ ಸೋಮವಾರ ಹೇಳಿದ್ದಾರೆ.

ದೇಶದ ಲಸಿಕೆ ಅಭಿಯಾನವು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹೊಸ ಆಯಾಮಗಳನ್ನು ಸೃಷ್ಟಿಸುತ್ತಿದೆ ಎಂದು ತಿಳಿಸಿರುವ ಅವರು, ಸ್ವಾತಂತ್ರ್ಯದ 75ನೇ ವರ್ಷದಲ್ಲಿ ದೇಶವು 75 ಕೋಟಿ ಡೋಸ್ ಲಸಿಕೆಯನ್ನು ಜನರಿಗೆ ನೀಡುವ ಮೂಲಕ ಸಾಧನೆ ಮಾಡಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಸಿಕ್ಕಿಂ, ಹಿಮಾಚಲ ಪ್ರದೇಶ, ಗೋವಾ, ದಾದ್ರಾ ಮತ್ತು ನಗರ್ ಹವೇಲಿ, ಲಡಾಖ್ ಹಾಗೂ ಲಕ್ಷದ್ವೀಪಗಳಲ್ಲಿ ಬಹುತೇಕ ವಯಸ್ಕರರೆಲ್ಲರೂ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಮಾಂಡವಿಯಾ ತಿಳಿಸಿದ್ದಾರೆ.

ದೇಶದಲ್ಲಿ 2021ರ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್–19 ಲಸಿಕೆ ನೀಡುವ ಅಭಿಯಾನ ಆರಂಭಿಸಲಾಯಿತು. ಫೆಬ್ರುವರಿ 2ರಿಂದ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವುದು ಶುರುವಾಯಿತು.

ಇದನ್ನೂ ಓದಿ– Covid-19 Karnataka Update: ರಾಜ್ಯದಲ್ಲಿ 673 ಹೊಸ ಪ್ರಕರಣಗಳು

60 ವರ್ಷ ಮತ್ತು ಅದಕ್ಕೂ ಮೇಲ್ಪಟ್ಟ ವಯಸ್ಸಿನ ವ್ಯಕ್ತಿಗಳಿಗೆ ಹಾಗೂ ಅನಾರೋಗ್ಯ ಸಮಸ್ಯೆಗಳಿರುವ 45 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಹಾಕುವುದಕ್ಕೆ ಮಾರ್ಚ್ 1ರಂದು ಚಾಲನೆ ನೀಡಲಾಯಿತು. ಏಪ್ರಿಲ್ 1ರಿಂದ 45 ವರ್ಷ ಮತ್ತು ಮೇಲ್ಪಟ್ಟ ಎಲ್ಲರಿಗೂ, ಅನಂತರ ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕುವುದನ್ನು ಆರಂಭಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.