ಕೋಲ್ಕತ್ತ: ಬಾಲಿವುಡ್‌ನ ಖ್ಯಾತ ಗಾಯಕ ಕೃಷ್ಣಕುಮಾರ್ ಕುನ್ನತ್(ಕೆಕೆ) ಅವರ ಶವಪರೀಕ್ಷೆಯ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಹೃದಯಸ್ತಂಭನದಿಂದ ಸಾವು ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

'ಮಯೋಕಾರ್ಡಿಯಲ್ ಇನ್‌ಫ್ರಾಕ್ಷನ್ ಕಾರಣದಿಂದ ಗಾಯಕ ಕೆಕೆ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಯು ತಿಳಿಸಿದೆ. ಸಾವಿನ ಹಿಂದೆ ಯಾವುದೇ ಅಸಹಜ ಕಾರಣಗಳಿಲ್ಲ. ವೈದ್ಯಕೀಯ ಪರೀಕ್ಷೆಯಲ್ಲೂ ಕೆಕೆ ಅವರಿಗೆ ಸುದೀರ್ಘವಾದ ಹೃದಯ ಸಮಸ್ಯೆಗಳು ಕಂಡುಬಂದಿವೆ. ಅಂತಿಮ ವರದಿ 72 ಗಂಟೆಗಳ ಬಳಿಕ ಸಿಗಲಿದೆ' ಎಂದು ಅಧಿಕಾರಿ ತಿಳಿಸಿದ್ದಾರೆ.

ಕೋಲ್ಕತ್ತದ ಎರಡು ಕಾಲೇಜುಗಳಲ್ಲಿ ಸಂಗೀತ ಕಾರ್ಯಕ್ರಮ ನೀಡಲು ಬಂದಿದ್ದ ಕೃಷ್ಣಕುಮಾರ್ ಕುನ್ನತ್ ಮಂಗಳವಾರ ರಾತ್ರಿ ಮೃತಪಟ್ಟಿದ್ದರು. ಕೆಕೆ ಅವರದ್ದು ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ.

ಕೆಕೆ ಸಾವು: ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.