ನವದೆಹಲಿ: ಇತ್ತೀಚೆಗೆ ವಿವಾದಕ್ಕೆ ಒಳಗಾಗಿದ್ದ ಬಿಬಿಸಿ ಸಂಸ್ಥೆಯ ಕಚೇರಿಯಲ್ಲಿ ಮಂಗಳವಾರ ಆದಾಯ ತೆರಿಗೆ ಇಲಾಖೆ ತಪಾಸಣೆ ನಡೆಸಿದೆ. ಗುಜರಾತ್ ಕೋಮು ಗಲಭೆ ಕುರಿತು ಬಿಬಿಸಿ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಎಂಬ ಸಾಕ್ಷ್ಯಚಿತ್ರ ನಿರ್ಮಿಸಿದ್ದಕ್ಕಾಗಿ ವ್ಯಾಪಕ ಚರ್ಚೆಯಾಗಿತ್ತು.

ತೆರಿಗೆಗೆ ಸಂಬಂಧಿಸಿದಂತೆ ಹಾಗೂ ಅಂತರರಾಷ್ಟ್ರೀಯ ಹಣಕಾಸಿನ ವಹಿವಾಟಿಗೆ ಸಂಬಂಧಿಸಿದಂತೆ ನವದೆಹಲಿಯ ಕಚೇರಿಯಲ್ಲಿ ಈ ತಪಾಸಣೆ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.

ಈ ವೇಳೆ ಐಟಿ ಅಧಿಕಾರಿಗಳು ಬಿಬಿಸಿ ಕಚೇರಿ ಸಿಬ್ಬಂದಿಯ ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಬಿಬಿಸಿ ಸಿದ್ಧಪಡಿಸಿರುವ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ತಡೆ ಹಿಡಿದಿರುವುದಕ್ಕೆ ಕೇಂದ್ರ ಸರ್ಕಾರ ಉಲ್ಲೇಖಿಸಿರುವ ಯಾವ ಕಾರಣವೂ ಸರಿಯಾಗಿಲ್ಲ, ಸಮಂಜಸವಾಗಿಲ್ಲ ಎಂದು ವಿರೋಧ ಪಕ್ಷಗಳು ಹೇಳಿದ್ದವು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಮಾಹಿತಿ ತಂತ್ರಜ್ಞಾನ ನಿಯಮ– 2021ರ ಅಡಿಯಲ್ಲಿ ವಿಶೇಷ ಅಧಿಕಾರವನ್ನು ಬಳಸಿ, ಈ ಸಾಕ್ಷ್ಯಚಿತ್ರವನ್ನು ತಡೆಹಿಡಿಯುವಂತೆ ಯೂಟ್ಯೂಬ್ಗೆ, ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದ ವೆಬ್ ಕೊಂಡಿಗಳನ್ನು ತಡೆಹಿಡಿಯುವಂತೆ ಟ್ವಿಟರ್ಗೆ ಸೂಚನೆ ರವಾನಿಸಿತ್ತು.

ಬಿಬಿಸಿ ವಿಶ್ವದ ಅತ್ಯಂತ ‘ಭ್ರಷ್ಟ ಬಕ್ವಾಸ್ ಕಾರ್ಪೊರೇಷನ್’: ಬಿಜೆಪಿ ಟೀಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.