ನವದೆಹಲಿ: ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಅವರು ಎರಡು ದಿನಗಳ ಭೇಟಿಗಾಗಿ ಸೋಮವಾರ ಬೆಳಗ್ಗೆ ದೆಹಲಿಗೆ ಆಗಮಿಸಿದರು.

ಜಪಾನ್ ವಿಶೇಷ ವಿಮಾನದ ಮೂಲಕ ಆಗಮಿಸಿದ ಫುಮಿಯೊ ಕಿಶಿದಾ ಅವರನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ಭಾರತೀಯ ಮತ್ತು ಜಪಾನ್ ರಾಜತಾಂತ್ರಿಕ ಅಧಿಕಾರಿಗಳು ಬರಮಾಡಿಕೊಂಡರು.

ತಮ್ಮ ಎರಡು ದಿನಗಳ ಭೇಟಿಯಲ್ಲಿ ಚೀನಾದ ಆಕ್ರಮಣ ನೀತಿಯನ್ನು ತಡೆಯುವ ಉದ್ದೇಶದಿಂದ ಇಂಡೊ– ಪೆಸಿಫಿಕ್ ಒಪ್ಪಂದವೂ ಸೇರಿದಂತೆ ಉಭಯ ದೇಶಗಳ ರಕ್ಷಣಾ ತಂತ್ರಗಾರಿಕೆ ಕುರಿತು ಭಾರತದೊಂದಿಗೆ ಚರ್ಚೆ ಮಾಡಲಿದ್ದಾರೆ ಎಂದು ಜಪಾನ್ ಅಧಿಕಾರಿಗಳು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಫುಮಿಯೊ ಕಿಶಿದಾ ಅವರು ಮಾತುಕತೆ ನಡೆಸಲಿದ್ದಾರೆ. ಉಭಯತ್ರರು ಜಿ–20 ಹಾಗೂ ಜಿ–7 ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಮಾಡಲಿದ್ದಾರೆ.

ಉಭಯ ದೇಶಗಳ ವಾರ್ಷಿಕ ಸಭೆಯಲ್ಲಿ ಜಪಾನ್ ಹಾಕಿಕೊಂಡಿರುವ ಹೊಸ ಯೋಜನೆಗಳನ್ನು ಫುಮಿಯೊ ಕಿಶಿದಾ ಘೋಷಿಸಲಿದ್ದಾರೆ. ಹಾಗೂ ಉಕ್ರೇನ್– ರಷ್ಯಾ ಯುದ್ಧದ ಕುರಿತಂತೆ ಕೂಡ ಚರ್ಚೆ ನಡೆಯಲಿದೆ. ವಾರ್ಷಿಕ ಸಭೆಯಲ್ಲಿ ಮುಖ್ಯವಾಗಿ ಪ್ರಸ್ತಾಪವಾಗಲಿರುವ ಇಂಡೊ– ಪೆಸಿಫಿಕ್ ಯೋಜನೆಯಲ್ಲಿ ಭಾರತವು ಮಹತ್ವದ ಪಾತ್ರ ವಹಿಸಲಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಉನ್ನತ ತಂತ್ರಜ್ಞಾನ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಉಭಯ ದೇಶಗಳು ಚರ್ಚೆ ನಡೆಸಲಿವೆ. ಇದೇ ವೇಳೆ ಹಲವು ಒಪ್ಪಂದಗಳಿಗೆ ಸಹಿ ಹಾಕಲಾಗುವುದು ಎಂದು ಭಾರತೀಯ ರಾಜತಾಂತ್ರಿಕ ಅಧಿಕಾರಿಗಳು ಹೇಳಿದ್ದಾರೆ.

ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಬಾಂಧವ್ಯ ಉತ್ತಮವಾಗಿತ್ತು. ಅದೇ ಸ್ನೇಹವನ್ನು ಕಿಶಿದಾ ಅವರು ಮುಂದುವರಿಸಲಿದ್ದಾರೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.