ನವದೆಹಲಿ: ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ 54 ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಪದ್ಮ’ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದರು.

ಇದೇ ವೇಳೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಇತ್ತೀಚೆಗೆ ನಿಧನರಾದ ಉದ್ಯಮಿ ರಾಕೇಶ್ ಜುಂಜನವಾಲಾ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಮೂವರಿಗೆ ಪದ್ಮವಿಭೂಷಣ, ನಾಲ್ವರಿಗೆ ಪದ್ಮಭೂಷಣ ಹಾಗೂ 47 ಗಣ್ಯರಿಗೆ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಜನವರಿ 25 ರಂದು 106 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿತ್ತು. ಉಳಿದ 52 ಗಣ್ಯರಿಗೆ ಮತ್ತೊಂದು ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

ಪದ್ಮವಿಭೂಷಣಕ್ಕೆ ಆರು ಮಂದಿ, ಪದ್ಮಭೂಷಣಕ್ಕೆ 9 ಸಾಧಕರು, ಪದ್ಮಶ್ರೀಗೆ 91 ಸಾಧಕರನ್ನು ಆಯ್ಕೆ ಮಾಡಲಾಗಿತ್ತು.

ಹಿನ್ನೆಲೆ ಗಾಯಕ ಸುಮನ್ ಕಲ್ಯಾಣಪುರ ಅವರಿಗೆ ವಯಸ್ಸಾಗಿದ್ದರಿಂದ ಪದ್ಮಶ್ರೀ ಪ್ರಶ್ತಿಯನ್ನು ರಾಷ್ಟ್ರಪತಿಯವರು ವೇದಿಕೆಯಿಂದ ಮುಂದೆ ಬಂದು ಪ್ರದಾನ ಮಾಡಿದ್ದು ವಿಶೇಷವಾಗಿತ್ತು.

ಇದೇ ವೇಳೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೆಲ ಕ್ಷಣ ಆತ್ಮೀಯತೆಯಿಂದ ಮಾತನಾಡಿದ್ದು ಕಂಡು ಬಂತು.

ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಔತಣಕೂಟ ಏರ್ಪಡಿಸಿದ್ದರು.

ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ಸೇರಿ ಆರು ಸಾಧಕರನ್ನು ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಹಾಗೂ ಇನ್ಫೋಸಿಸ್ ಫೌಂಡೇಷನ್‌ನ ಅಧ್ಯಕ್ಷೆ ಸುಧಾಮೂರ್ತಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕದ ಐವರು ಸಾಧಕರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರ ದಿಂದ ಡಾ. ಖಾದರ್ ವಲ್ಲಿ ದುಡೆ ಕುಲ್ಲಾ, ನೃತ್ಯದ ಮೂಲಕ ಕೊಡವ ಸಂಸ್ಕೃತಿಯನ್ನು ಪಸರಿಸಲು ಶ್ರಮಿಸಿದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷೆ ರಾಣಿ ಮಾಚಯ್ಯ, ತಮಟೆಯ ತಂದೆಯೆಂದು ಪ್ರಖ್ಯಾತರಾದ ಚಿಕ್ಕಬಳ್ಳಾಪುರದ ಪಿಂಡಿ ಪಾಪನಹಳ್ಳಿ ಮುನಿವೆಂಕಟಪ್ಪ, ಬೀದರ್‌ನ ಕಲಾವಿದ ಷಾ ರಶೀದ್ ಅಹ್ಮದ್ ಖಾದ್ರಿ, ಪುರಾತತ್ವ ಶಾಸ್ತ್ರಜ್ಞ ಎಸ್.ಸುಬ್ಬರಾಮನ್ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದ ಸಾಧಕರು.

Padma Awards 2023; ಬೈರಪ್ಪ, ಎಸ್.ಎಂ ಕೃಷ್ಣಗೆ ಪ್ರಶಸ್ತಿ: ಇಲ್ಲಿದೆ ಪಟ್ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.