ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಹಿರಂಗವಾಗಿ ಬೆಂಬಲಿಸಿದ್ದಾರೆ.

ಬಿಜೆಪಿಯೇತರ ಮುಖಂಡರು ಮತ್ತು ಪಕ್ಷಗಳನ್ನು ನಿರ್ಮೂಲನೆ ಮಾಡಲು ಪಿತೂರಿ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮನೀಷ್ ಸಿಸೋಡಿಯಾ ಸಿಬಿಐನಿಂದ ಬಂಧನಕ್ಕೊಳಗಾದ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷವನ್ನು ಕಾಂಗ್ರೆಸ್ ಬೆಂಬಲಿಸಿರಲಿಲ್ಲ. ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕೇಜ್ರಿವಾಲ್ ಬೆಂಬಲಿಸಿದ್ದಾರೆ.

ಬಿಜೆಪಿಯೇತರ ಮುಖಂಡರು ಮತ್ತು ಪಕ್ಷಗಳ ವಿರುದ್ಧ ಕಾನೂನು ಕ್ರಮ ಜರುಗಿಸುವ ಮೂಲಕ ಅವರನ್ನು ಇಲ್ಲದಾಗಿಸಲು ಪಿತೂರಿ ನಡೆಸಲಾಗಿದೆ. ನಮಗೆ ಕಾಂಗ್ರೆಸ್ ಜತೆ ಭಿನ್ನಭಿಪ್ರಾಯವಿದೆ. ಆದರೆ ಮಾನನಷ್ಟ ಮೊಕದ್ದಮೆಯಲ್ಲಿ ಈ ರೀತಿ ರಾಹುಲ್ ಗಾಂಧಿ ಅವರನ್ನು ಸಿಲುಕಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಪ್ರಶ್ನೆ ಮಾಡುವುದು ಸಾರ್ವಜನಿಕರ ಮತ್ತು ವಿರೋಧ ಪಕ್ಷಗಳ ಜವಾಬ್ದಾರಿಯಾಗಿದೆ. ನ್ಯಾಯಾಲಯಕ್ಕೆ ನಾವು ಗೌರವಿಸುತ್ತೇವೆ. ಆದರೆ ಈ ನಿರ್ಣಯಕ್ಕೆ ಸಹಮತವಿಲ್ಲ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.