ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿ ಘಟನೆಗೆ ಸಚಿವ ಅಜಯ್ ಮಿಶ್ರಾ ಅವರ ಭಾಷಣವೇ ಕಾರಣ ಎಂದಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ರೈತರ ಜತೆ ನಿಲ್ಲಬೇಕಾಗಿದ್ದ ಬಿಜೆಪಿ ಸರ್ಕಾರ ಸಚಿವರ ಪರ ನಿಂತಿದೆ ಎಂದು ಟೀಕಿಸಿದ್ದಾರೆ.

ಉನ್ನತ ಹುದ್ದೆಯಲ್ಲಿರುವ ರಾಜಕಾರಣಿಗಳು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದು. ತಮ್ಮ ಸ್ಥಾನಮಾನ ಹಾಗೂ ಹುದ್ದೆಯ ಘನತೆಗೆ ತಕ್ಕ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಅಲಹಾಬಾದ್ ಹೈಕೋರ್ಟ್ ಸೋಮವಾರ ಹೇಳಿತ್ತು. ಲಖಿಂಪುರ ಖೇರಿ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ನ ಲಖನೌ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತ್ತು. ಅಲ್ಲದೆ, ಜಾಮೀನು ನಿರಾಕರಿಸಿತ್ತು. ಇದರ ಬೆನ್ನಲ್ಲೇ ಪ್ರಿಯಾಂಕಾ ಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಶೇ 250ರಷ್ಟು ಹೆಚ್ಚಿಸಿದ ಕೇಂದ್ರ: ಪ್ರಿಯಾಂಕಾ

ಘಟನೆಗೂ ಕೆಲವು ದಿನಗಳ ಮುನ್ನ ಕೇಂದ್ರ ಸಚಿವರು ರೈತರ ವಿರುದ್ಧ ಹೇಳಿಕೆ ನೀಡಿರದಿದ್ದರೆ ಹಿಂಸಾಚಾರ ನಡೆಯುತ್ತಿರಲಿಲ್ಲ ಎಂದು ವಿಶೇಷ ತನಿಖಾ ತಂಡ ನೀಡಿದ್ದ ವರದಿಯನ್ನು ಕೋರ್ಟ್ ಉಲ್ಲೇಖಿಸಿತ್ತು.

ಈ ವಿಚಾರವಾಗಿ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕಾ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೋದಿ ಆಡಳಿತ ಜಾಹೀರಾತಿನಲ್ಲಿ ಮಾತ್ರ: ಪ್ರಿಯಾಂಕಾ ಗಾಂಧಿ ವಾದ್ರಾ ಲೇವಡಿ

‘ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವರು ತಮ್ಮ ಭಾಷಣದಲ್ಲಿ ರೈತರಿಗೆ ಬೆದರಿಕೆ ಹಾಕಿರುವುದೇ ಲಖಿಂಪುರ ಖೇರಿ ರೈತ ಹತ್ಯಾಕಾಂಡಕ್ಕೆ ಪ್ರಮುಖ ಕಾರಣ. ಬಿಜೆಪಿ ಸರ್ಕಾರ ರೈತರ ಪರವಾಗಿ ನಿಲ್ಲುವ ಬದಲು ಸಚಿವರ ಪರ ನಿಂತಿದೆ. ನ್ಯಾಯಕ್ಕಾಗಿ ಹೋರಾಟ ಮುಂದುವರಿದಿದೆ. ನ್ಯಾಯದ ಜ್ವಾಲೆಯನ್ನು ಆರದಂತೆಸಂತ್ರಸ್ತ ರೈತರ ಕುಟುಂಬ ಮತ್ತು ನಾವೆಲ್ಲರೂ ಸೇರಿ ತಡೆಯಲಿದ್ದೇವೆ’ ಎಂದು ಅವರು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.