ಲಖಿಂಪುರ ಖೇರಿ: ಲಿಖಿಂಪುರ ಖೇರಿ ಹಿಂಸಾಚಾರದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ಎಐ) ಗುರುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಮತ್ತು ಇನ್ನಿತರ ಮೂವರನ್ನು ಉತ್ತರ ಪ್ರದೇಶದ ತಿಕೋನಿಯಾ ಗ್ರಾಮಕ್ಕೆ ಕರೆದೊಯ್ದು ಘಟನೆಯನ್ನು ಮರುಸೃಷ್ಟಿಸಿದೆ.

ಬಿಗಿ ಭದ್ರತೆಯ ನಡುವೆ ಮೂವರು ಆರೋಪಿಗಳನ್ನು ಲಖಿಂಪುರಜಿಲ್ಲಾ ಕೇಂದ್ರದಿಂದ ಸುಮಾರು 60 ಕಿ.ಮೀ. ದೂರದಲ್ಲಿರುವ ತಿಕೊನಿಯಾ-ಬನ್ಬೀರ್ಪುರ ರಸ್ತೆಯಲ್ಲಿರುವ ಘಟನಾ ಸ್ಥಳಕ್ಕೆ ಕರೆದೊಯ್ಯಲಾಯಿತು. ಬಳಿಕ ಘಟನೆಯನ್ನು ಮರುಸೃಷ್ಟಿಸಲಾಗಿದೆ.

ಇದನ್ನೂ ಓದಿ:ಲಖಿಂಪುರ ಹಿಂಸಾಚಾರ: ಕೇಂದ್ರ ಸಚಿವರ ಮಗ ಆಶಿಶ್ ಮಿಶ್ರಾಗೆ ಜಾಮೀನು ನಿರಾಕರಣೆ

ಅಕ್ಟೋಬರ್ 3ರಂದು ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಹತ್ಯೆಯಾಗಿದ್ದರು. ಬಿಜೆಪಿ ಕಾರ್ಯಕರ್ತರು ಸಾಗುತ್ತಿದ್ದವಾಹನ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಇದರಲ್ಲಿ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ಇದ್ದರು ಎನ್ನಲಾಗಿದೆ.

ಆಕ್ರೋಶಗೊಂಡ ರೈತರು ವಾಹನದಲ್ಲಿದ್ದ ಕೆಲವರನ್ನು ಹೊಡೆದರು ಎಂದು ಆರೋಪಿಸಲಾಗಿದೆ. ಮೃತರಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಚಾಲಕ ಸೇರಿದ್ದಾರೆ. ಘಟನೆಯಲ್ಲಿ ಓರ್ವ ಪತ್ರಕರ್ತ ಕೂಡ ಮೃತಪಟ್ಟಿದ್ದಾರೆ.

ಕೇಂದ್ರ ಸಚಿವ ಅಜಯ್ ಮಿಶ್ರಾ ಹಾಗೂ ಅವರ ಪುತ್ರ ಆಶಿಶ್ ಮಿಶ್ರಾ ವಾಹನದಲ್ಲಿ ಇದ್ದರು ಎಂದು ರೈತರು ಆರೋಪಿಸಿದ್ದರು. ಆದರೆ ಆರೋಪವನ್ನು ನಿರಾಕರಿಸಿರುವ ಆಶಿಶ್ ಹಾಗೂ ಅವರ ತಂದೆ, ಆ ಸಂದರ್ಭದಲ್ಲಿ ಬೇರೆ ಕಾರ್ಯಕ್ರಮದಲ್ಲಿದ್ದರು ಎಂಬುದನ್ನು ಸಾಬೀತುಪಡಿಸಲು ಸಾಕ್ಷ್ಯವನ್ನು ಒದಗಿಸುತ್ತೇವೆ ಎಂದಿದ್ದರು.

ಅಕ್ಟೋಬರ್ 9ರಂದು 12 ತಾಸಿನ ಸುದೀರ್ಘ ವಿಚಾರಣೆಯ ಬಳಿಕ ಆಶಿಶ್ ಮಿಶ್ರಾ ಅವರನ್ನು ಬಂಧಿಸಲಾಯಿತು. ಅಕ್ಟೋಬರ್ 12ರಿಂದ 15ರ ವರೆಗೆ ಪೊಲೀಸ್ ಕಸ್ಟಡಿಗೆ ರವಾನಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.