ಮುಂಬೈ: ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಪೊಲೀಸರ ಅನುಮತಿ ಪಡೆಯುವುದನ್ನು ಮಹಾರಾಷ್ಟ್ರ ಸರ್ಕಾರ ಕಡ್ಡಾಯಗೊಳಿಸಿದೆ.

ಈ ವಿಚಾರವಾಗಿ ಮಹಾರಾಷ್ಟ್ರ ಡಿಜಿಪಿ ರಜನೀಶ್ ಸೇಠ್ ಹಾಗೂ ಪೊಲೀಸ್ ಆಯುಕ್ತ ಸಂಜಯ್ ಪಾಂಡೆ ಮಾರ್ಗಸೂಚಿ ಸಿದ್ಧಪಡಿಸಲಿದ್ದಾರೆ.

‘ಮುಂದಿನ ಎರಡರಿಂದ ಮೂರು ದಿನಗಳಲ್ಲಿ ಅಧಿಸೂಚನೆ ಹೊರಡಿಸಲಿದ್ದೇವೆ’ ಎಂದು ಗೃಹ ಸಚಿವ ದಿಲೀಪ್ ವಸ್ಲೆ ಪಾಟೀಲ್ ಹೇಳಿದ್ದಾರೆ.

ಮಸೀದಿಯ ಧ್ವನಿವರ್ಧಕ ಸದ್ದಿನ ಮೇಲೆ ರಾಜ್ ಠಾಕ್ರೆ ಕೆಂಗಣ್ಣು

‘ಅನುಮತಿಸಲಾಗಿರುವ ಡೆಸಿಬಲ್ ಮಿತಿಯೊಳಗೆ ಮಾತ್ರ ಧ್ವನಿವರ್ಧಕಗಳ ಬಳಕೆಗೆ ಅವಕಾಶ ನೀಡಬೇಕು. ನಿಯಮವನ್ನು ಯಾರೇ ಉಲ್ಲಂಘಿಸಿದರೂ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಮುಸ್ಲಿಂ ಸಮುದಾಯದವರು ಧ್ವನಿವರ್ಧಕಗಳ ಮೂಲಕ ಮಸೀದಿಗಳಲ್ಲಿ ಆಜಾನ್ ನುಡಿಸುತ್ತಿರುವುದು ಸರಿಯಲ್ಲ. ಅವರು ಬದಲಾಗದಿದ್ದರೆ ಮಸೀದಿಗಳ ಮುಂದೆ ಅವರ ಧ್ವನಿವರ್ಧಕದ ಎರಡು ಪಟ್ಟು ಹನುಮಾನ್ ಚಾಲೀಸಾ ಹಾಕುತ್ತೇವೆ’ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾದ ಅಧ್ಯಕ್ಷ (ಎಂಎನ್ಎಸ್) ರಾಜ್ ಠಾಕ್ರೆ ಅವರು ಇತ್ತೀಚೆಗೆ ಹೇಳಿದ್ದರು. ಇದರ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಧ್ವನಿವರ್ಧಕ ಬಳಕೆಗೆ ಪೊಲೀಸರ ಅನುಮತಿ ಕಡ್ಡಾಯಗೊಳಿಸಲು ನಿರ್ಧರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.