ಮುಂಬೈ: ‘2008ರಲ್ಲಿನ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್) ನನ್ನ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ನಾಲ್ವರು ಆರ್‌ಎಸ್‌ಎಸ್ ಮುಖಂಡರ ಹೆಸರು ಹೇಳುವಂತೆ ಎಟಿಎಸ್ ನನಗೆ ಬೆದರಿಕೆ ಒಡ್ಡಿದೆ’ ಎಂದು ಪ್ರಕರಣದ ಸಾಕ್ಷಿದಾರರೊಬ್ಬರು ಮಂಗಳವಾರ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ಆರೋಪ ಮಾಡಿದ್ದಾರೆ.

ಸುಲಿಗೆ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮುಂಬೈಯ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಮಾಲೆಗಾಂವ್ ಸ್ಫೋಟ ಪ್ರಕರಣದ ತನಿಖೆ ನಡೆಸಿದಾಗ ಎಟಿಎಸ್‌ನ ಹೆಚ್ಚುವರಿ ಆಯುಕ್ತರಾಗಿ ನೇಮಕಗೊಂಡಿದ್ದರು.

ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಕೈಗೆತ್ತಿಕೊಳ್ಳುವ ಮುನ್ನ, ಎಟಿಎಸ್ ಪ್ರಕರಣದ ತನಿಖೆ ನಡೆಸಿದಾಗ ಸಾಕ್ಷಿದಾರರ ಹೇಳಿಕೆಯನ್ನು ದಾಖಲಿಸಿಕೊಂಡಿತ್ತು.

‘ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇಂದ್ರೇಶ್‌ಕುಮಾರ್ ಸೇರಿದಂತೆ ಆರ್‌ಎಸ್‌ಎಸ್‌ನ ಇತರ ನಾಯಕರ ಹೆಸರನ್ನು ತೆಗೆದುಕೊಳ್ಳುವಂತೆ ಅಂದಿನ ಹಿರಿಯ ಎಟಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಮತ್ತು ಇನ್ನೊಬ್ಬ ಅಧಿಕಾರಿ ಬೆದರಿಕೆ ಹಾಕಿದ್ದರು’ ಎಂದು ಸಾಕ್ಷಿದಾರ ಎನ್‌ಐಎನ ವಿಶೇಷ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.