ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೌರಾ–ಜಲ್‌ಪೈಗುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡುವ ಸಮಾರಂಭದಲ್ಲಿ ಶುಕ್ರವಾರ ಅಸಮಾಧಾನ ಗೊಂಡರು. ರೈಲು ನಿಲ್ದಾಣದಲ್ಲಿ ಸೇರಿದ್ದ ಜನರು ಬಿಜೆಪಿ ಪರ ಘೋಷಣೆ ಕೂಗಿದ್ದು ಮಮತಾ ಅವರ ಅತೃಪ್ತಿಗೆ ಕಾರಣವಾಯಿತು.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಮಮತಾ ಅವರನ್ನು ಸಮಾಧಾನ ಪಡಿಸಲು ನಡೆಸಿದ ಪ್ರಯತ್ನ ಫಲ ಕೊಡಲಿಲ್ಲ. ವೇದಿಕೆ ಏರಲು ನಿರಾಕರಿಸಿದ ಮಮತಾ ಅವರು ಪ್ರೇಕ್ಷಕರ ಜತೆಯಲ್ಲಿಯೂ ಕುಳಿತರು.

ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ್ ರೈಲು ಮತ್ತು ಇತರ ಅಭಿವೃದ್ಧಿ ಯೋಜನೆಗಳಿಗೆ ವರ್ಚುವಲ್ ಆಗಿ ಚಾಲನೆ ನೀಡಿದರು.

ನಂತರ, ವೈಷ್ಣವ್ ಅವರು ಮೆಟ್ರೊ ರೈಲಿನಲ್ಲಿ ಸಂಚರಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಘೋಷಣೆ ಕೂಗಿದ ಘಟನೆ ಗಂಭೀರವಾದುದೇನಲ್ಲ ಎಂದರು. ಮಮತಾ ಅವರಿಗೆ ಆದರ ಮತ್ತು ಗೌರವದಿಂದ ಆಹ್ವಾನ ನೀಡಲಾಗಿದೆ.

ಆಕ್ರೋಶ ವ್ಯಕ್ತಪಡಿಸುವಂತಹ ಘಟನೆಯೇನೂನಡೆದಿಲ್ಲ. ಪಕ್ಷದ ಕಾರ್ಯಕರ್ತರು ಘೋಷಣೆ ಕೂಗುವುದು ಸಾಮಾನ್ಯ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.