ಮುಂಬೈ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ಮರಾಠಿ ನಟಿ ಕೇತಕಿ ಚಿತಳೆ ಅವರು ಶುಕ್ರವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಚಿತಳೆ, ‘ಸರಿಯಾದ ಸಮಯದಲ್ಲಿ ಮಾತನಾಡುತ್ತೇನೆ. ಜೈ ಹಿಂದ್, ಜೈ ಮಹಾರಾಷ್ಟ್ರ’ ಎಂದು ಘೋಷಣೆ ಕೂಗಿದ್ದಾರೆ.

ಫೇಸ್ಬುಕ್ನಲ್ಲಿ ಮರಾಠಿ ಭಾಷೆಯಲ್ಲಿ ಪೋಸ್ಟ್ವೊಂದನ್ನುಪ್ರಕಟಿಸಿದ್ದ ಚಿತಳೆ, ‘ಪವಾರ್ ಹೆಸರನ್ನು ನಮೂದಿಸಿ, ‘ನೀವು ಬ್ರಾಹ್ಮಣರನ್ನು ದ್ವೇಷಿಸುತ್ತೀರಿ. ನಿಮಗಾಗಿ ನರಕ ಕಾಯುತ್ತಿದೆ’ ಎಂದು ಬರೆದುಕೊಂಡಿದ್ದರು.

ಓದಿ...ಅಪ್ಪನಾದ ವಿನಯ್ ಕುಮಾರ್; ಹೆಣ್ಣು ಮಗುವಿಗೆ ಜನ್ಮ ನೀಡಿದ ರಿಚಾ ಸಿಂಗ್

ಸ್ವಪ್ನಿಲ್ ನೆಟ್ಕೆ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಥಾಣೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಮೇ 14ರಂದು ಚಿತಳೆ ಅವರನ್ನು ಪೊಲೀಸರು ಬಂಧಿಸಿದ್ದರು.

ಮುಂಬೈನ ಭೋಯಿವಾಡ ಪೊಲೀಸ್ ಠಾಣೆಯಲ್ಲಿ ಕೇತಕಿ ಚಿತಳೆ ವಿರುದ್ಧ ಐಪಿಸಿ ಸೆಕ್ಷನ್ 153A, 500, 501 ಮತ್ತು 504, 506 ಮತ್ತು 34 ರ ಅಡಿಯಲ್ಲಿ ವಿವಿಧ ಪ್ರಕರಣಗಳು ದಾಖಲಾಗಿದ್ದವು.

ಓದಿ...ವಿಡಿಯೊ | ರಾಷ್ಟ್ರಪತಿ ಚುನಾವಣೆಗೆದ್ರೌಪದಿ ಆಯ್ಕೆ: ಕುಣಿದು ಕುಪ್ಪಳಿಸಿದ ಚೌಹಾಣ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ ಅಡಿ ನವಿ ಮುಂಬೈನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮರಾಠಿ ನಟಿ ಕೇತಕಿ ಚಿತಳೆ ಅವರಿಗೆ ಜೂನ್ 16ರಂದು ಥಾಣೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಓದಿ...
ಶರದ್ ಪವಾರ್ ವಿರುದ್ಧ ಅವಹಳೇನಕಾರಿ ಪೋಸ್ಟ್: ಮರಾಠಿ ನಟಿ ಚಿತಳೆ ಬಂಧನ

ಬೌದ್ಧ ಧರ್ಮದ ಬಗ್ಗೆ ಅವಹೇಳನ: ಮರಾಠಿ ನಟಿ ಚಿತಳೆ ಜೂ.7ರವರೆಗೆ ನ್ಯಾಯಾಂಗ ಬಂಧನಕ್ಕೆ

ಜಾತಿ ನಿಂದನೆ ಪ್ರಕರಣ: ನಟಿ ಕೇತಕಿ ಚಿತಳೆಗೆ ಜಾಮೀನು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.