ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ ಸೇನೆ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದು, ಈ ವೇಳೆ ಮೂವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಅನುಮಾನಾಸ್ಪದ ಚಲನವಲನ ಕಂಡುಬಂದ ನಂತರ ಉತ್ತರ ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಸೇನೆಯು ಒಳನುಸುಳುವಿಕೆ ತಡೆ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಅವರು ಹೇಳಿದರು.

'ಉರಿಯಲ್ಲಿನ ಎಲ್‌ಒಸಿಯಲ್ಲಿ ನುಸುಳುಕೋರರು ನಡೆಸಿದ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಗಾಯಗೊಂಡರೆ, ಒಬ್ಬ ನುಸುಳುಕೋರನನ್ನು ಹೊಡೆದುರುಳಿಸಲಾಗಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಒಳನುಸುಳುವಿಕೆ ತಡೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಸೈನಿಕರ ಮೇಲೆ ದಾಳಿ ನಡೆಸಿದ್ದಾರೆ. ಇದು ಗುಂಡಿನ ಚಕಮಕಿಗೆ ಕಾರಣವಾಯಿತು' ಎಂದು ಅವರು ಹೇಳಿದರು.

ಕಳೆದ ಎರಡು ದಿನಗಳಿಂದ ಉಭಯ ದೇಶಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿ ನಿಯಂತ್ರಣ ರೇಖೆಯ ಈ ಭಾಗದಲ್ಲಿ ಒಳನುಸುಳುತ್ತಿರುವ ಭಯೋತ್ಪಾದಕರನ್ನು ತಡೆಯಲು ಆ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.