ತಿರುವನಂತಪುರಂ: ನೆಯ್ಯಟ್ಟಿಂಕರದ ಆರ್ಯಂಕೋಡ್‌ನಲ್ಲಿರುವ ಸ್ಥಳೀಯ ಪೊಲೀಸ್ ಠಾಣೆಯ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಮಂಗಳವಾರ ಬೆಳಗ್ಗೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಪೊಲೀಸರು ಅವರನ್ನು ಹಿಡಿಯಲು ಯತ್ನಿಸಿದರಾದರೂ, ಘಟನೆ ನಡೆದ ಕೂಡಲೇ ಇಬ್ಬರೂ ಸ್ಥಳದಿಂದ ಪರಾರಿಯಾಗಿದ್ದಾರೆ.

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಪೊಲೀಸ್ ಠಾಣೆಯ ಮೇಲೆ ಎರಡು ಬಾಂಬ್‌ಗಳನ್ನು ಎಸೆದಿದ್ದಾರೆ. ಆದರೆ, ಅವರೆಡೂ ಸ್ಫೋಟಗೊಳ್ಳಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೆಟ್ರೋಲ್ ತುಂಬಿದ ಬಾಟಲಿಗಳಲ್ಲಿ ಒಂದನ್ನು ಠಾಣೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಜೀಪಿಗೆ ಎಸೆದಿದ್ದರಿಂದ ಹಿಂಬದಿ ಗಾಜು ಜಖಂಗೊಂಡಿದೆ. ಮತ್ತೊಂದು ಬಾಟಲಿ ಅಲ್ಲೇ ಇದ್ದ ಮರಳಿನ ರಾಶಿಯ ಮೇಲೆ ಬಿದ್ದಿದ್ದರಿಂದ ಯಾವುದೇ ಹಾನಿಯಾಗಿಲ್ಲ' ಎಂದು ಅವರು ಹೇಳಿದರು.

ಸದ್ಯ ತನಿಖೆ ಪ್ರಗತಿಯಲ್ಲಿದ್ದು, ಘಟನೆಯ ಹಿಂದಿರುವ ದುಷ್ಕರ್ಮಿಗಳ ಬಗ್ಗೆ ಪೊಲೀಸರಿಗೆ ಸಾಕಷ್ಟು ಸುಳಿವುಗಳಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.