ನವದೆಹಲಿ: ಕ್ರಿಮಿನಲ್ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ ಅನರ್ಹಗೊಂಡಿದ್ದ ಲಕ್ಷದ್ವೀಪದ ಸಂಸದ, ಎನ್ಸಿಪಿ ನಾಯಕ ಮೊಹಮ್ಮದ್ ಫೈಜಲ್ ಸದಸ್ಯತ್ವವನ್ನು ಲೋಕಸಭೆ ಕಾರ್ಯಾಲಯ ಬುಧವಾರ ಮರುಸ್ಥಾಪಿಸಿದೆ.

ಜನವರಿಯಲ್ಲಿ ಲಕ್ಷದ್ವೀಪದ ಸೆಷನ್ಸ್ ನ್ಯಾಯಾಲಯ, 2009ರ ಕೊಲೆ ಯತ್ನ ಪ್ರಕರಣದಲ್ಲಿ ಫೈಜಲ್ ಸೇರಿದಂತೆ ನಾಲ್ವರು ಅಪರಾಧಿಗಳಿಗೆ 10 ವರ್ಷ ಜೈಲು ಮತ್ತು ತಲಾ ಒಂದು ಲಕ್ಷ ದಂಡ ವಿಧಿಸಿತ್ತು.

ಇದನ್ನೂ ಓದಿ: ಮೇ 10ರಂದು ಒಂದೇ ಹಂತದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ: ಮೇ 13ರಂದು ಫಲಿತಾಂಶ

ಈ ತೀರ್ಪಿನ ವಿರುದ್ಧ ಫೈಜಲ್ ಅವರು ಕೇರಳ ಹೈಕೋರ್ಟ್ ಮೇಲ್ಮನವಿ ಸಲ್ಲಿಸಿದ್ದರು. ಬಳಿಕ ಪ್ರಕರಣದ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಶಿಕ್ಷೆಯನ್ನು ಅಮಾನತುಗೊಳಿಸಿತ್ತು.

ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದ ಫೈಜಲ್, ಈ ಸಂಬಂಧ ಮಂಗಳವಾರದಂದು ಸುರ್ಪೀಂ ಕೋರ್ಟ್ ಮೆಟ್ಟಿಲೇರಿದ್ದರು.

ಸುಪ್ರೀ ಕೋರ್ಟ್ನಲ್ಲಿ ವಿಚಾರಣೆ ಆರಂಭವಾಗುವ ಮುನ್ನವೇ ಅನರ್ಹತೆಯನ್ನು ಮರುಸ್ಥಾಪಿಸಲಾಗಿದೆ.

ಕೇರಳ ಹೈಕೋರ್ಟ್ ಜನವರಿ 25ರಂದು ಶಿಕ್ಷೆ ಅಮಾನತುಗೊಳಿಸಿ ಆದೇಶ ಹೊರಡಿಸಿದ ತಕ್ಷಣ ನನ್ನ ಲೋಕಸಭಾ ಸದಸ್ಯತ್ವ ಮರುಸ್ಥಾಪಿಸಬೇಕಿತ್ತು ಎಂದು ಫೈಜಲ್ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.