ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಕಾಂಗ್ರೆಸ್‌ನ ಮಾಜಿ ವಕ್ತಾರ ರಿಷಬ್ ಭಡೋರಿಯಾ ಅವರು ತಮ್ಮ ಪತ್ನಿ ಭಾವನಾ ಭಡೋರಿಯಾ ಅವರನ್ನು ಸೋಮವಾರ ಬೆಳಿಗ್ಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯ ಬಳಿಕ ರಿಷಭ್ ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ. ಗ್ವಾಲಿಯರ್‌ನ ಥಾಟಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಮ್ ನಗರ ಪ್ರದೇಶದಲ್ಲಿ ಘಟನೆ ನಡೆದಿದೆ.

ರಿಷಭ್ ಅವರ ತಂದೆ ಕೃಷ್ಣಕಾಂತ್ ಭಡೋರಿಯಾ ಅವರು ಸೋಮವಾರ ಮುಂಜಾನೆ 2.30ರ ವೇಳೆಗೆ ಪೊಲೀಸ್ ನಿಯಂತ್ರಣ ಕಚೇರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಹತ್ಯೆಯ ಹಿಂದಿನ ಕಾರಣ ಇನ್ನೂ ತಿಳಿದು ಬಂದಿಲ್ಲ.

‘ರಿಷಭ್ ಅವರ ವಿರುದ್ಧ ಈ ಹಿಂದೆಯೂ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡಿದ್ದ ಕುರಿತು ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ತನಿಖೆ ಪ್ರಗತಿಯಲ್ಲಿದೆ’ ಎಂದು ಸಬ್ ಇನ್‌ಸ್ಪೆಕ್ಟರ್ ಬ್ರಹ್ಮಾನಂದ ಶರ್ಮಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.