ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಅವರ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣದ ಆರೋಪ ಎದುರಿಸುತ್ತಿದ್ದ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರ ಬಂಧನದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ‘ವರ್ಷಾ‘ ನಿವಾಸದಲ್ಲಿ ಮಂಗಳವಾರ ರಾತ್ರಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಕಚೇರಿ ಶೋಧ: ಮರ್ಸಿಡಿಸ್ ಕಾರು, ನಗದು ವಶ

ಸಚಿನ್ ವಾಜೆ ಅವರನ್ನು ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ) ಮಾ.13ರಂದು ವಶಕ್ಕೆ ಪಡೆದಿತ್ತು. ಅಲ್ಲಿಯವರೆಗೆ ವಾಜೆ ಅವರು ಮುಂಬೈ ನಗರ ಪೊಲೀಸ್ ಕ್ರೈಮ್ ಬ್ರ್ಯಾಂಚ್‌ನ ಕ್ರೈಮ್ ಇಂಟೆಲಿಜೆನ್ಸ್ ಯೂನಿಟ್(ಸಿಐಉ) ಘಟಕದಲ್ಲೇ ಕಾರ್ಯನಿರ್ವಹಿಸುತ್ತಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯಕ ಪೊಲೀಸ್ ಆಯುಕ್ತರೂ ಸೇರಿದಂತೆ ಅಪರಾಧ ವಿಭಾಗದ ಏಳು ಅಧಿಕಾರಿಗಳ ಹೇಳಿಕೆಗಳನ್ನುಎನ್‌ಐಎ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.