ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಅವರ ಮಗ ಆದಿತ್ಯ ಠಾಕ್ರೆ, ಸಚಿವ ಸಂಜಯ್ ರಾವುತ್ ಅವರಿಗೆ ಮಂಪರು ಪರೀಕ್ಷೆ ನಡೆಸಿದರೆ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಮತ್ತು ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ಅವರ ಸಾವಿನ ರಹಸ್ಯ ಹೊರಬೀಳಲಿದೆ ಎಂದು ಬಿಹಾರದ ಬಿಜೆಪಿ ನಾಯಕ ನಿಖಿಲ್ ಆನಂದ್ ಹೇಳಿದ್ದಾರೆ.

ಮಹಾರಾಷ್ಟ್ರದ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಸುಶಾಂತ್, ದಿಶಾ ಸಾವಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಮಾಡಿರಬಹುದು. ಆದರೆ, ದೇವರ ಮುಂದೆ ಏನನ್ನೂ ಮುಚ್ಚಿಡಲು ಸಾಧ್ಯವಿಲ್ಲ ಎಂದಿದ್ದಾರೆ.

‘ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ ಮತ್ತು ಸಂಜಯ್ ರಾವುತ್ ವಿರುದ್ಧ ಸಾಕ್ಷಿ ಸಂಗ್ರಹಿಸುವಲ್ಲಿ ಸಿಬಿಐ ವಿಫಲವಾಗಿರಬಹುದು. ಆದರೆ, ಅವರು ಮಾಡಿರುವ ತಪ್ಪು ದೇವರಿಗೆ ತಿಳಿದಿದೆ. ಅವರನ್ನು ಶಿಕ್ಷಿಸಿ, ರಜಪೂತ್ ಮತ್ತು ಸಾಲಿಯಾನ್‌ಗೆ ನ್ಯಾಯ ಒದಗಿಸುವಂತೆ ದೇವರನ್ನು ಪ್ರಾರ್ಥಿಸಿತ್ತೇನೆ’ ಎಂದು ಅವರು ಹೇಳಿದ್ದಾರೆ.

ಜುಲೈ 14,2020ರಲ್ಲಿ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತಮ್ಮ ಫ್ಲ್ಯಾಟ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದರು. ಇದಕ್ಕೂ 6 ದಿನಗಳ ಮೊದಲು ಸುಶಾಂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್, ಮುಂಬೈನ ಮಲಾಡ್ ಪ್ರದೇಶದ ಅಪಾರ್ಟ್‌ಮೆಂಟ್‌ನಲ್ಲಿ ಮೃತಪಟ್ಟಿದ್ದರು.

ಮಹಾರಾಷ್ಟ್ರದಲ್ಲಿ ಸದ್ಯ ರಾಜಕೀಯ ಬಿಕ್ಕಟ್ಟು ಏರ್ಪಟ್ಟಿದ್ದು, ಸರ್ಕಾರದ ವಿರುದ್ಧ ಬಂಡೆದ್ದಿರುವ ಸಚಿವ ಏಕನಾಥ್ ಶಿಂಧೆ 35ಕ್ಕೂ ಅಧಿಕ ಶಾಸಕರ ಜೊತೆ ಗುವಾಹಟಿಗೆ ತೆರಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.