ನವದೆಹಲಿ: ಪತ್ರಕರ್ತರನ್ನು ಗುರಿಯಾಗಿಸಿ ನಡೆಯುವ ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿ ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆಯು (ಎನ್‌ಸಿಆರ್‌ಬಿ) ನಿರ್ದಿಷ್ಟವಾದ ದತ್ತಾಂಶ ನಿರ್ವಹಣೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.

ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್, ‘ಮಾಧ್ಯಮ ಪ್ರತಿನಿಧಿಗಳ ಸುರಕ್ಷತೆ ಹಾಗೂ ರಕ್ಷಣೆಗೆ ಸಂಬಂಧಪಟ್ಟಂತೆ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರವು 2017ರಲ್ಲಿ ಸಲಹೆ ನೀಡಿದೆ’ ಎಂದು ತಿಳಿಸಿದರು.

‘ಸಂವಿಧಾನದ 7ನೇ ಅನುಸೂಚಿ ಪ್ರಕಾರ, ಪೊಲೀಸ್ ಹಾಗೂ ಕಾನೂನು–ಸುವ್ಯವಸ್ಥೆ ಕಾಪಾಡುವುದು ರಾಜ್ಯಕ್ಕೆ ಸೇರಿದ ವಿಷಯಗಳಾಗಿವೆ. ಅಪರಾಧಗಳನ್ನು ತಡೆಯುವುದು, ಪತ್ತೆ ಹಚ್ಚುವುದು, ತನಿಖೆ ನಡೆಸಿ ಅಪರಾಧಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕಾದ್ದು ರಾಜ್ಯ ಸರ್ಕಾರಗಳ ಜವಾಬ್ದಾರಿ’ ಎಂದು ಅವರು ಸದನಕ್ಕೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.